ಹಾಸನ : ಜಿಲ್ಲೆಯ ಬೇಲೂರು ತಾಲ್ಲೂಕಿನ ಲಿಂಗಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಇನ್ನೋವಾ ಕಾರು ರಸ್ತೆಯ ಬದಿಯಿದ್ದ ಅಡಿಕೆ ತೋಟಕ್ಕೆ ಬಿದ್ದಿದ್ದು, ವಾಹನದಲ್ಲಿ ಇದ್ದ ಚಾಲಕ ಗಂಭೀರ ಗಾಯಗೊಂಡಿದ್ದಾರೆ.
ಇನ್ನೋವಾ ಕಾರು ಮಂಗಳೂರಿನಿಂದ ಬೇಲೂರು ಕಡೆಗೆ ತೆರಳುತ್ತಿದ್ದ ವೇಳೆ ರಸ್ತೆ ತಿರುವಿನಲ್ಲಿ ನಿಯಂತ್ರಣ ಸಿಗದೇ ಅಡಿಕೆ ತೋಟಕ್ಕೆ ಬಿದ್ದಿದೆ ಎನ್ನಲಾಗಿದೆ. ಘಟನೆಯಲ್ಲಿ ಕಾರು ಚಾಲಕ ಮಹಮದ್ (30) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಕಾರು ಬಿದ್ದ ರಭಸಕ್ಕೆ ಮೂರು ಅಡಿಕೆ ಮರಗಳು ಮುರಿದು ಹೋಗಿದ್ದು, ಇನ್ನೋವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಅರೇಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಫಿಟ್ ಆಗಿದ್ದರೂ ಮಯಾಂಕ್ ಯಾದವ್‌ಗೆ ಸಿಗದ ಸ್ಥಾನ.. ಲಕ್ನೋ ವಿಚಿತ್ರ ನಿರ್ಧಾರ!


















