ಕೊಪ್ಪಳ | ಕೊಲೆ ಹಾಗೂ ಮರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪರಶುರಾಮ ಅಲಿಯಾಸ್ ರಾಮಣ್ಣ (49)ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 35 ಸಾವಿರ ರೂ. ದಂಡ ವಿಧಿಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
2004ರ ಜನವರಿ 15ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ದುರುಗಪ್ಪ ನಾಯಕನ ಮೇಲೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಇದೇ ವೇಳೆ ಅಲ್ಲಿದ್ದ ಆರೋಪಿಯ ಪತ್ನಿಯ ಮೇಲೂ ಹೊಟ್ಟೆ ಭಾಗಕ್ಕೆ ಮರಣಾಂತಿಕ ಹಲ್ಲೆ ನಡೆಸಲಾಗಿತ್ತು. ಈ ಕುರಿತು ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದ್ದ ವೇಳೆ ಆರೋಪಿ ಪರಾರಿಯಾಗಿ, ಬೇರೆ ಹೆಸರಿನಲ್ಲಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದನು. ದೀರ್ಘಕಾಲದ ಶೋಧದ ಬಳಿಕ 2025ರಲ್ಲಿ ಕನಕಗಿರಿ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಸರ್ಕಾರ ಪರವಾಗಿ ಅಭಿಯೋಜಕರಾದ ನಾಗಲಕ್ಷ್ಮಿ ವಾದ ಮಂಡಿಸಿದ್ದರು. ಇದೀಗ ನ್ಯಾಯಾಲಯ ಆರೋಪಿಯನ್ನು ದೋಷಿ ಎಂದು ಘೋಷಿಸಿ ಶಿಕ್ಷೆ ವಿಧಿಸಿದೆ.
ಇದನ್ನೂ ಓದಿ : ಆಂಧ್ರದಲ್ಲಿ 6 ಸೆಕೆಂಡಿಗೊಂದು ವೋಟ್, ಮಧ್ಯರಾತ್ರಿಯ ನಂತರ ಲಕ್ಷಾಂತರ ಮತದಾನ – ಇದು ಹೇಗೆ ಸಾಧ್ಯ!



















