ಚಿತ್ರದುರ್ಗ : 3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡ ನಿರ್ಜನ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೃತರನ್ನು ಶಿವಲಿಂಗಪ್ಪ (50) ಎಂದು ಗುರುತಿಸಲಾಗಿದೆ.
ರಸಗೊಬ್ಬರ ಅಂಗಡಿ ನಡೆಸುತ್ತಿದ್ದ ‘ಕೈ’ ಮುಖಂಡ ಶಿವಲಿಂಗಪ್ಪ, ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಶಿವಲಿಂಗಪ್ಪ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು.
ಇದೀಗ ಅವರ ಮೃತದೇಹ ಮುಖದ ಗುರುತು ಸಿಗದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ತನಿಖೆಗೆ ಕುಟುಂಬಸ್ಥರು ಆಗ್ರಹಿಸಿದ್ದು, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!


















