ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಜೀವನಾಡಿಯಾಗಿರುವ ‘ನಮ್ಮ ಮೆಟ್ರೋ'(BMRCL), ಪ್ರಯಾಣಿಕರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಮುಂಬರುವ ಭಾನುವಾರ, ಅಂದರೆ ಏಪ್ರಿಲ್ 5, 2026ರಂದು ನೇರಳೆ ಮಾರ್ಗದ ಆಯ್ದ ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ.
ಹೌದು.. ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿ ನಡೆಯಲಿದ್ದು, ಹೀಗಾಗಿ ಭಾನುವಾರ (ಏ.5ರಂದು) ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಮೆಜೆಸ್ಟಿಕ್‌ನಿಂದ ಮೈಸೂರು ರಸ್ತೆವರೆಗೆ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ.
ಇದರ ಹೊರತಾಗಿ ಚಲ್ಲಘಟ್ಟದಿಂದ ಮೈಸೂರು ರಸ್ತೆ ಹಾಗೂ ಮೆಜೆಸ್ಟಿಕ್‌ನಿಂದ ವೈಟ್‌ಫೀಲ್ಡ್‌ವರೆಗೆ, ಹಸಿರು ಮಾರ್ಗದಲ್ಲಿ ಮಾದಾವರದಿಂದ ರೇಷ್ಮೆ ಸಂಸ್ಥೆವರೆಗೆ ಮತ್ತು ಹಳದಿ ಮಾರ್ಗದಲ್ಲಿ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ವೇಳಾಪಟ್ಟಿಯಂತೆ ನಮ್ಮ ಮೆಟ್ರೋ ಸೇವೆ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಲಿದೆ. ಇನ್ನು, ಭಾನುವಾರ 9 ಗಂಟೆ ಬಳಿಕ ಮೆಜೆಸ್ಟಿಕ್‌ದಿಂದ ಮೈಸೂರು ರಸ್ತೆವರೆಗೆ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು BMRCL ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ : ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!



















