ಬೆಂಗಳೂರು: ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ದೇಶದ ನವರತ್ನ ಕಂಪನಿಗಳಲ್ಲಿ ಒಂದಾಗಿರುವ ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆಯಲ್ಲಿ (RITES Recruitment 2026) ಖಾಲಿ ಇರುವ 15 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಸಿಸ್ಟಂಟ್ (ಎಚ್.ಆರ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆ (RITES)
ಒಟ್ಟು ಹುದ್ದೆಗಳು: 15
ಹುದ್ದೆಗಳ ಹೆಸರು: ಅಸಿಸ್ಟಂಟ್ (ಎಚ್.ಆರ್)
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 27
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 30 ವರ್ಷ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಜನರಲ್ ಹಾಗೂ ಒಬಿಸಿ ಸಮುದಾಯದವರಿಗೆ 600 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿಯವರಿಗೆ 300 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 66 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಲಿಖಿತ ಪರೀಕ್ಷೆ ನಡೆಸಿ ಸಂದರ್ಶನಕ್ಕೆ ಆಹ್ವಾನಿಸುವ ಮೂಲಕ ನೇಮಕಾತಿ ಮಾಡಲಾಗುತ್ತದೆ ಎಂಬುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿಯ ವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು rites.com ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಒಂದೇ ಆ್ಯಪ್‌ನಲ್ಲಿ ಸರ್ಕಾರದ 2,400 ಸೇವೆಗಳು ಲಭ್ಯ – ಯಾವ ಆ್ಯಪ್ ಇದು ಗೊತ್ತಾ?



















