ಬೆಂಗಳೂರು : ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಇಂದು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಇಂದು ಸ್ಕೌಟ್ಸ್ & ಗೈಡ್ಸ್ ಆಯುಕ್ತ PGR ಸಿಂಧ್ಯಾ ಅವರಿಗೆ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಸಂತೋಷ್ ಹೆಗ್ಡೆ ಭಾಗವಹಿಸಿದ್ದು, ಈ ವೇಳೆ ಭಾಷಣ ಮಾಡುವಾಗ ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡಿದ್ದಾರೆ. ಬಳಿಕ ಭಾಷಣ ಮುಗಿಸಿ ವೇದಿಕೆ ಮೇಲಿನ ಕುರ್ಚಿ ಮೇಲೆ ಕುಳಿತುಕೊಳ್ಳುವಾಗ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸದ್ಯ ಅವರಿಗೆ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ
ಎನ್. ಸಂತೋಷ್ ಹೆಗ್ಡೆ ಅವರ ಆರೋಗ್ಯ ಈಗ ಸ್ಥಿರವಾಗಿದೆ. ಆರಂಭದಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದ್ದರೂ, ವೈದ್ಯಕೀಯ ತಪಾಸಣೆಯ ಬಳಿಕ ಅವರು ಸುರಕ್ಷಿತವಾಗಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಯು.ಟಿ. ಖಾದರ್ ಅವರ ಸಮಯಪ್ರಜ್ಞೆ:
ಅಸ್ವಸ್ಥರಾಗಿ ವೇದಿಕೆ ಮೇಲೆ ಕುಸಿದುಬೀಳುತ್ತಿದ್ದಂತೆಯೇ ಕೂಡಲೇ ಸಂತೋಷ ಹೆಗ್ಡೆಯವರನ್ನು ಸ್ವತ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ‘ಸಂತೋಷ್ ಹೆಗ್ಡೆ ಅವರಿಗೆ ವಾಂತಿಯಾಗಿ ಕುಸಿದುಬಿದ್ದಾಗ ತಕ್ಷಣ ಆಸ್ಪತ್ರೆಗೆ ಸೇರಿಸುವುದು ಅನಿವಾರ್ಯವಾಗಿತ್ತು. ಈಗ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರಾಮವಾಗಿದ್ದಾರೆ’ ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.
ಇದನ್ನೂ ಓದಿ : ಪುಟ್ಟ ಕಂದಮ್ಮಗಳಿಂದ ಗೊಂಬೆಯ ಅಂತ್ಯಸಂಸ್ಕಾರ.. ಗಾಜಾದ ಕರಾಳತೆಗೆ ಈ ವಿಡಿಯೋವೇ ಸಾಕ್ಷಿ!


















