ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿನ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿ ಸಮೀರ್ ತನ್ನ ಮೇಲಿನ ಆರೋಪಗಳನ್ನು ಬಲವಾಗಿ ಅಲ್ಲಗಳೆದಿದ್ದಾನೆ. ಪ್ರಕರಣದ ಮಧ್ಯೆ ವೈರಲ್ ಆಗಿರುವ ವಿಡಿಯೋದ ಬಗ್ಗೆ ಮಾತನಾಡಿದ ಸಮೀರ್, ವಿಡಿಯೋ ರೆಕಾರ್ಡ್ ಆಗಿರುವುದು ನಿಜ, ಆದರೆ ಅದನ್ನು ತಾನು ಚಿತ್ರೀಕರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ.
ಈ ವಿಡಿಯೋವನ್ನು ಯಾರು ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಲು ತನ್ನ ಮತ್ತು ಆರೋಪಿಯಾದ ಹುಡುಗಿಯ ಮೊಬೈಲ್ ಫೋನ್‌ಗಳನ್ನು ಪರಿಶೀಲಿಸುವಂತೆ ಸಮೀರ್ ಆಗ್ರಹಿಸಿದ್ದಾನೆ. ತಂಪು ಪಾನೀಯದಲ್ಲಿ ಪ್ರಜ್ಞೆ ತಪ್ಪಿಸುವ ಔಷಧ ನೀಡಿದ್ದರೆ, ಹುಡುಗಿ ಪ್ರಜ್ಞೆ ಕಳೆದುಕೊಳ್ಳಬೇಕಿತ್ತು. ಆದರೆ, ನಿಜವಾಗಿ ಪ್ರಜ್ಞೆ ಕಳೆದುಕೊಂಡಿದ್ದು ನಾನೇ, ಹುಡುಗಿಯಲ್ಲ ಎಂದು ಸಮೀರ್ ಹೇಳಿಕೆ ನೀಡಿದ್ದಾನೆ. ವಿಡಿಯೋವನ್ನು ಆ ಹುಡುಗಿಯೇ ತನ್ನ ಫೋನ್‌ನಲ್ಲಿ ರೆಕಾರ್ಡ್ ಮಾಡಿರುವುದಾಗಿ ಸಮೀರ್ ಆರೋಪಿಸಿದ್ದಾನೆ.
ಘಟನೆ ಏನು?
ಹುಬ್ಬಳ್ಳಿ ಜಿಲ್ಲೆಯಲ್ಲಿ ಮುಸ್ಲಿಂ ಜಿಮ್ ಟ್ರೈನರ್‌ನಿಂದ ಹಿಂದೂ ಯುವತಿಯರ ಮೇಲೆ ಲವ್ ಜಿಹಾದ್ ಆರೋಪ ಕೇಳಿಬಂದಿತ್ತು. ಈ ಸಂಬಂಧ ಎರಡು ಕುಟುಂಬಗಳ ನಡುವೆ ಗಲಾಟೆ ಆಗಿದ್ದು, ಶ್ರೀರಾಮಸೇನೆ ಇದರಲ್ಲಿ ಎಂಟ್ರಿಯಾಗಿತ್ತು. ಎರಡು ಕುಟುಂಬಗಳು ಆರೋಪ-ಪ್ರತ್ಯಾರೋಪ ಮಾಡಿದ್ದಾರೆ. ಕುಟುಂಬಗಳಿಂದ ದೂರು ಪಡೆದು ತನಿಖೆ ಮಾಡಲು ಪೊಲೀಸರು ಮುಂದಾಗಲಿದ್ದರು.
ತನ್ನ ಜಿಮ್‌ಗೆ ಬರುತ್ತಿದ್ದ ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಿ ಅವರನ್ನು ಲವ್ ಜಿಹಾದ್ ಬಲೆಗೆ ಹಾಕಿಕೊಳ್ಳುತ್ತಿದ್ದ ಆರೋಪವೊಂದು ಮುಸ್ಲಿಂ ಜಿಮ್ ಟ್ರೈನರ್ ಮೇಲೆ ಕೇಳಿಬಂದಿತ್ತು. ಮಸಲ್ ಫ್ಯಾಕ್ಟರಿ ಜಿಮ್ ಟ್ರೈನರ್ ಸಮೀರ್ ಮುಲ್ಲಾ ಎನ್ನುವ ಯುವಕನ ಮೇಲೆ ಈ ಗಂಭೀರ ಆರೋಪ ಕೇಳಿಬಂದಿತ್ತು. ತನ್ನ ಜೀಮ್‌ಗೆ ಬರುತ್ತಿದ್ದ ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡುತ್ತಿದ್ದ ಸಮೀರ್, ಅವರನ್ನು ಪುಸಲಾಯಿಸಿ ಅವರ ಜೊತೆಗೆ ಸಲುಗೆ ಬೆಳೆಸುತ್ತಿದ್ದ. ಬಳಿಕ ಅವರ ಜೊತೆ ಖಾಸಗಿ ಕ್ಷಣಗಳ ಫೋಟೋ ಮತ್ತು ವಿಡಿಯೋ ತೆಗೆದುಕೊಂಡು, ಅದನ್ನು ಇಟ್ಟುಕೊಂಡು ಯುವತಿಯರಿಗೆ ಬ್ಲಾಕ್ ಮೇಲೆ ಮಾಡುತ್ತಿದ್ದ ಆರೋಪ ಕೇಳಿಬಂದಿತ್ತು ಎನ್ನಲಾಗಿದೆ.


















