ಮೈಸೂರು : ನೀರಿನ ದರ ಮತ್ತು ವಿದ್ಯುತ್ ದರ ಇಳಿಸುವಂತೆ ಆಗ್ರಹಿಸಿ ಎಸ್‌ಯುಸಿಐ ಸಂಘಟನೆ ವತಿಯಿಂದ ಇಂದು ಮೈಸೂರು ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಮೈಸೂರು ಮಹಾನಗರ ಪಾಲಿಕೆ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ನೀರು ಮತ್ತು ವಿದ್ಯುತ್ ದರಗಳ ಏರಿಕೆಯಿಂದ ಸಾಮಾನ್ಯ ಜನತೆ ಸಂಕಷ್ಟ ಅನುಭವಿಸುತ್ತಿದ್ದರು. ತಕ್ಷಣವೇ ದರ ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಇದಲ್ಲದೆ, ಪಾಲಿಕೆಯಲ್ಲಿ ಭ್ರಷ್ಟಾಚಾರ, ಕಳಪೆ ಕಾಮಗಾರಿ ಹಾಗೂ ದುಂದು ವೆಚ್ಚ ಹೆಚ್ಚುತ್ತಿರುವುದನ್ನು ಖಂಡಿಸಿದ ಪ್ರತಿಭಟನಾಕಾರರು, ಈ ಅವ್ಯವಸ್ಥೆಗಳನ್ನು ತಕ್ಷಣ ತಡೆಗಟ್ಟಬೇಕು ಎಂದು ಆಗ್ರಹಿಸಿದ್ದಾರೆ. ಜನಪರ ಆಡಳಿತವನ್ನು ಅನುಸರಿಸಿ, ಜನವಿರೋಧಿ ನೀತಿಗಳನ್ನು ಕೈಬಿಡುವಂತೆ ಎಸ್‌ಯುಸಿಐ ಕಾರ್ಯಕರ್ತರು ಸರ್ಕಾರ ಮತ್ತು ಮಹಾನಗರ ಪಾಲಿಕೆಗೆ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ರೈತನಿಗೆ ಧಮ್ಕಿ ಆರೋಪ | ತಹಶೀಲ್ದಾರ್ ಡಾ.ಸ್ಮಿತಾರಾಮು ವಿರುದ್ದ ದೂರು


















