ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಿಮ್ಮ ಅಧಿಕಪ್ರಸಂಗ ಕರ್ನಾಟಕದ ಜನತೆ ಒಪ್ಪಲ್ಲ – ರಾಜ್ಯಪಾಲರ ವಿರುದ್ದ ಕರವೇ ನಾರಾಯಣಗೌಡ ಕಿಡಿ!

April 4, 2026
Share on WhatsappShare on FacebookShare on Twitter

ಬೆಂಗಳೂರು : SSLC ಹಿಂದಿ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರು ಪತ್ರ ಬರೆದಿರುವ ವಿಚಾರವೀಗ ಕರ್ನಾಟಕ ರಕ್ಷಣಾ ವೇದಿಕೆಯ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಕೆಂಡಾಮಂಡಲವಾಗಿದ್ದಾರೆ.

ಈ ಬಗ್ಗೆ ಬಹಿರಂಗ ಪತ್ರ ಬರೆದಿರುವ ಅವರು, ಮಾನ್ಯ ರಾಜ್ಯಪಾಲರಾದ ಶ್ರೀ ಥಾವರ್‌ ಚಂದ್‌ ಗೆಹ್ಲೋಟ್‌ ಅವರೇ, ಕರ್ನಾಟಕ ಸರ್ಕಾರಕ್ಕೆ ನೀವು ಬರೆದ ಪತ್ರದ ಕುರಿತ ಮಾಧ್ಯಮ ವರದಿಗಳನ್ನು ಗಮನಿಸಿದೆ. ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ನೀವು ಹೇಳಿದ್ದೀರಿ. ನಿಮ್ಮ ಈ ಪತ್ರ, ಈ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತೆ ಇದೆ. ನಿಮ್ಮ ಅಧಿಕಪ್ರಸಂಗವನ್ನು ಕರ್ನಾಟಕದ ಜನತೆ ಒಪ್ಪಿಕೊಳ್ಳುವುದಿಲ್ಲ.

ರಾಜ್ಯಪಾಲರು ಸರ್ಕಾರದ ಪದನಿಮಿತ್ತ ಮುಖ್ಯಸ್ಥರು ಎಂಬುದನ್ನು ನೀವು ಮರೆತಿದ್ದೀರಿ. ನೀವು ನಮ್ಮಿಂದ ನೇರವಾಗಿ ಆಯ್ಕೆಯಾದ ಜನಪ್ರತಿನಿಧಿಯಲ್ಲ. ಒಂದು ಸರ್ಕಾರ ಬಹುಮತದೊಂದಿಗೆ ಸದೃಢವಾಗಿ ಕಾರ್ಯ ನಿರ್ವಹಿಸುತ್ತಿರುವಾಗ ದೈನಂದಿನ ಆಡಳಿತದಲ್ಲಿ ಮೂಗು ತೂರಿಸಲು ನಿಮಗೆ ಯಾವುದೇ ನೈತಿಕ ಅಧಿಕಾರವಿಲ್ಲ, ಸಾಂವಿಧಾನಿಕ ಹೊಣೆಗಾರಿಕೆಯಿಲ್ಲ. ಅದು ನಿಮ್ಮ ವ್ಯಾಪ್ತಿಯ ಕೆಲಸವೂ ಅಲ್ಲ.

ಮಾನ್ಯ ರಾಜ್ಯಪಾಲರಾದ ಶ್ರೀ ತಾವರಚಂದ್ ಗೆಹ್ಲೋಟ್ ಅವರೇ,
ಕರ್ನಾಟಕ ಸರ್ಕಾರಕ್ಕೆ ನೀವು ಬರೆದ ಪತ್ರದ ಕುರಿತ ಮಾಧ್ಯಮ ವರದಿಗಳನ್ನು ಗಮನಿಸಿದೆ. ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ನೀವು ಹೇಳಿದ್ದೀರಿ. ನಿಮ್ಮ ಈ ಪತ್ರ, ಈ ಹಸ್ತಕ್ಷೇಪ ಒಕ್ಕೂಟ…

— ನಾರಾಯಣಗೌಡ್ರು.ಟಿ.ಎ | ‌Narayanagowdru T.A. (@narayanagowdru) April 4, 2026

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಕಾಲಕಾಲಕ್ಕೆ ಬದಲಾವಣೆ ಮಾಡುವ ಸಂವಿಧಾನಬದ್ಧ ಹಕ್ಕು ರಾಜ್ಯ ಸರ್ಕಾರಕ್ಕಿದೆ. ಸರ್ಕಾರ ಈಗ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತರುತ್ತಿರುವುದಕ್ಕೆ ಸಾಕಷ್ಟು ಕಾರಣಗಳಿವೆ. ಇದರ ಸಾಧಕ ಬಾಧಕಗಳನ್ನು ನಮ್ಮ ಜನಪ್ರತಿನಿಧಿಗಳು ನೋಡಿಕೊಳ್ಳುತ್ತಾರೆ. ʻಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘʻದವರು ನಿಮಗೆ ಕೊಟ್ಟಿದ್ದಾರೆ ಎನ್ನಲಾದ ಮನವಿಗೆ ತುರ್ತಾಗಿ ಪ್ರತಿಕ್ರಿಯಿಸಿರುವುದನ್ನು ಕೇಳಿ ಆಶ್ಚರ್ಯವಾಯಿತು. ಬೆಂಗಳೂರಿನಲ್ಲಿ ಇಂಥದ್ದೊಂದು ಸಂಘ ಇದೆ ಎಂಬುದೇ ನಮಗೆ ತಿಳಿದಿರಲಿಲ್ಲ. ಈ ರೀತಿಯ ನಾಟಕಗಳನ್ನು ನಾವು ಎಷ್ಟೋ ನೋಡಿದ್ದೇವೆ. ಇಂಥ ಕುತಂತ್ರಗಳು ಕರ್ನಾಟಕಕ್ಕೆ ಹೊಸದೇನೂ ಅಲ್ಲ. ಮರೆಯಲ್ಲಿ ನಿಂತು ಬಾಣ ಬಿಡುವ ಈ ಹೇಡಿಗಳು ಬೀದಿಗೆ ಬರಲಿ ಎಂದು ನಾವೂ ಕಾಯುತ್ತಿದ್ದೇವೆ.

ರಾಜ್ಯಪಾಲರ ಹುದ್ದೆ ಎಂಬುದೇ ಪ್ರಜಾಪ್ರಭುತ್ವ ವ್ಯವಸ್ಥೆ ಒಳಗೆ ನುಸುಳಿಕೊಂಡಿರುವ ರಾಜಶಾಹಿ ವ್ಯವಸ್ಥೆಯ ಒಂದು ಪಳೆಯುಳಿಕೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಪ್ರಭುಗಳು. ಇನ್ಯಾರೋ ಇಲ್ಲಿ ರಾಜರಂತೆ ಮೆರೆಯುವುದು ಸಾಧ್ಯವಿಲ್ಲ. ನಿಮ್ಮ ಈ ಅಧಿಕಪ್ರಸಂಗದ ಪತ್ರ ರಾಜ್ಯಪಾಲರ ವ್ಯವಸ್ಥೆ ನಮ್ಮ ದೇಶಕ್ಕೆ ಬೇಕೇ ಎಂಬ ಪ್ರಶ್ನೆಯನ್ನು ಮತ್ತೆ ಮುನ್ನೆಲೆಗೆ ತಂದಂತಾಗಿದೆ.

ಜನರಿಂದ ಆಯ್ಕೆಯಾದ ಸರ್ಕಾರದ ದೈನಂದಿನ ಆಡಳಿತದ ತೀರ್ಮಾನದ ಕುರಿತು ಪತ್ರ ಬರೆಯಲು ನಿಮಗೆ ಯಾವುದೇ ಹಕ್ಕಿಲ್ಲ. ಒಂದು ವೇಳೆ ನೀವು ಸಾಮಾನ್ಯ ನಾಗರಿಕರಾಗಿ ಈ ಪತ್ರವನ್ನು ಬರೆದಿದ್ದರೆ, ಮೊದಲು ಉತ್ತರದ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತ್ರಿಭಾಷಾ ನೀತಿ ಅನ್ವಯ ಕನ್ನಡವನ್ನು ಮೂರನೇ ಭಾಷೆಯನ್ನಾಗಿ ಅಲ್ಲಿನ ಮಕ್ಕಳಿಗೆ ಕಲಿಸಲು ಹೇಳಿ. ನಿಮಗೆ ಆ ಧೈರ್ಯವಿಲ್ಲದಿದ್ದರೆ ಕನ್ನಡಿಗರ ಹಿತಾಸಕ್ತಿಗೆ ವಿರುದ್ಧವಾಗಿ ಕರ್ನಾಟಕದ ನೆಲದಲ್ಲಿ ನಿಂತು ಮಾತನಾಡಬೇಡಿ. ತೃತೀಯ ಭಾಷೆಯ ಮೇಲಿನ ಪ್ರೇಮವನ್ನು ಉತ್ತರ ಭಾರತದ ರಾಜ್ಯಗಳಲ್ಲಿ ಉಕ್ಕಿ ಹರಿಸಿ. ಪಾಪ, ಅಲ್ಲಿನ ಮಕ್ಕಳು ಇದುವರೆಗೆ ಎರಡೇ ಭಾಷೆಗಳನ್ನು ಓದಿಕೊಂಡು ಬಂದಿದ್ದಾರೆ.

ನೀವು ಹಿಂದಿ ಸಾಮ್ರಾಜ್ಯಶಾಹಿಯ ಲಾಬಿಯ ಪರವಾಗಿ ಮಾತನಾಡುತ್ತಿದ್ದೀರಿ ಎಂಬುದು ನಮಗೆ ಚೆನ್ನಾಗಿ ಗೊತ್ತಿದೆ. ಕನ್ನಡಿಗರು ಔದಾರ್ಯವಂತರು. ನಮ್ಮ ನೆಲದಲ್ಲಿ ನಿಮಗೆ ಐಶಾರಾಮಿ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದೇವೆ. ಕನ್ನಡಿಗರ ತೆರಿಗೆ ದುಡ್ಡಿನಲ್ಲಿ ರಾಜಭವನ ನಡೆಯುತ್ತಿದೆ. ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ. ಇದೇ ಅಧಿಕಪ್ರಸಂಗವನ್ನು ಮುಂದುವರೆಸಿದರೆ ರಾಜ್ಯಪಾಲರೇ, ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ ಎಂದು ನಾವು ಹೇಳಬೇಕಾಗುತ್ತದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನೀವು ಬರೆದಿರುವ ಪತ್ರವನ್ನು ಕೂಡಲೇ ಹಿಂದಕ್ಕೆ ಪಡೆಯಿರಿ. ಸರ್ಕಾರ ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದು ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದಿದೆ. ದಶಕಗಳಿಂದ ಕನ್ನಡದ ಜನತೆಯನ್ನುಕಾಡುತ್ತಿದ್ದ ಶಾಪ ವಿಮೋಚನೆಯಾಗಿದೆ. ಒಂದು ವೇಳೆ ಇದನ್ನು ಜಾರಿಗೆ ತರುವುದನ್ನು ತಡೆಯಲು ಯಾರೇ ಯತ್ನಿಸಿದರೂ ಕರ್ನಾಟಕದಲ್ಲಿ ಧಗಧಗಿಸುವ ಕ್ರಾಂತಿಯ ಜ್ವಾಲೆ ಹೊತ್ತಿಕೊಳ್ಳಲಿದೆ.

ಮಾನ್ಯ ರಾಜ್ಯಪಾಲರೇ, ನಿಮ್ಮ ಕೆಲಸ ನೀವು ನೋಡಿಕೊಳ್ಳಿ. ಹಿಂಬಾಗಿಲಿನಲ್ಲಿ ಬಂದು ಆಡಳಿತ ಮಾಡುವ ಯತ್ನ ಮಾಡಬೇಡಿ, ನಿಮಗೆ ಆ ಅಧಿಕಾರವನ್ನು ಕರ್ನಾಟಕದ ಜನತೆ ಕೊಟ್ಟಿಲ್ಲ. ರಾಜಭವನದಲ್ಲಿ ನಿಮ್ಮ ಉಪಚಾರಕ್ಕೆ ಏನಾದರೂ ಕೊರತೆಯಾಗಿದ್ದರೆ ಕೇಳಿ, ವ್ಯವಸ್ಥೆ ಮಾಡಿಕೊಡೋಣ. ಬೇರೆ ಉಸಾಬರಿಯನ್ನು ನಮ್ಮ ಜನಪ್ರತಿನಿಧಿಗಳು ನೋಡಿಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಅಭಿಷೇಕ್ ಶರ್ಮಾಗೆ ನಾಯಕತ್ವ ತಪ್ಪಿದ್ದಕ್ಕೆ ಯುವರಾಜ್ ಸಿಂಗ್ ಅಸಮಾಧಾನ

Tags: bengaloreKarnataka News beat
SendShareTweet
Previous Post

ಅಭಿಷೇಕ್ ಶರ್ಮಾಗೆ ನಾಯಕತ್ವ ತಪ್ಪಿದ್ದಕ್ಕೆ ಯುವರಾಜ್ ಸಿಂಗ್ ಅಸಮಾಧಾನ

Next Post

ಗ್ಯಾಸ್ ಅಭಾವ – ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ!

Related Posts

ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ.. ಇಬ್ಬರ ಬಂಧನ!
ಬೆಂಗಳೂರು

ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ.. ಇಬ್ಬರ ಬಂಧನ!

ಉಡುಪಿ | ಮನೆ ಬೀಗ ಒಡೆದು 14 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿ ಅರೆಸ್ಟ್‌!
ಉಡುಪಿ

ಉಡುಪಿ | ಮನೆ ಬೀಗ ಒಡೆದು 14 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿ ಅರೆಸ್ಟ್‌!

ಗ್ಯಾಸ್ ಅಭಾವ – ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ!
ರಾಮನಗರ

ಗ್ಯಾಸ್ ಅಭಾವ – ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ!

ಕೊಟ್ಟ ಹಣ ವಾಪಸ್‌ ಕೇಳಿದ್ದಕ್ಕೆ ಮಹಿಳೆಯರ ಮೇಲೆ ಹಲ್ಲೆ – ಕೇಸ್‌ ದಾಖಲು
ಉತ್ತರ ಕನ್ನಡ

ಕೊಟ್ಟ ಹಣ ವಾಪಸ್‌ ಕೇಳಿದ್ದಕ್ಕೆ ಮಹಿಳೆಯರ ಮೇಲೆ ಹಲ್ಲೆ – ಕೇಸ್‌ ದಾಖಲು

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಬಾಲಕಿ ದುರ್ಮರಣ!
ಚಿಕ್ಕಬಳ್ಳಾಫುರ

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಬಾಲಕಿ ದುರ್ಮರಣ!

IPL ಟಿಕೆಟ್‌ಗೆ ಶಾಸಕರು ಕೈಚಾಚುವುದು ನಾಚಿಕೆಗೇಡಿನ ಸಂಗತಿ : ಸದಾನಂದಗೌಡ ಆಕ್ರೋಶ
ರಾಜಕೀಯ

IPL ಟಿಕೆಟ್‌ಗೆ ಶಾಸಕರು ಕೈಚಾಚುವುದು ನಾಚಿಕೆಗೇಡಿನ ಸಂಗತಿ : ಸದಾನಂದಗೌಡ ಆಕ್ರೋಶ

Next Post
ಗ್ಯಾಸ್ ಅಭಾವ – ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ!

ಗ್ಯಾಸ್ ಅಭಾವ - ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅನ್ಯಗ್ರಹ ಜೀವಿಗಳು ಮನುಷ್ಯರ ಬಗ್ಗೆ ಏನೆಂದುಕೊಂಡಿರಬಹುದು? UFO ರಹಸ್ಯ ಬಯಲಿಗೆ ಟ್ರಂಪ್ ಆದೇಶ!

ಅನ್ಯಗ್ರಹ ಜೀವಿಗಳು ಮನುಷ್ಯರ ಬಗ್ಗೆ ಏನೆಂದುಕೊಂಡಿರಬಹುದು? UFO ರಹಸ್ಯ ಬಯಲಿಗೆ ಟ್ರಂಪ್ ಆದೇಶ!

ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್.. ಮುಂಬೈ ವಿರುದ್ದ ಡೆಲ್ಲಿಗೆ 6 ವಿಕೆಟ್‌ಗಳ ಜಯ!

ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್.. ಮುಂಬೈ ವಿರುದ್ದ ಡೆಲ್ಲಿಗೆ 6 ವಿಕೆಟ್‌ಗಳ ಜಯ!

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ.. 1.07 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ!

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ.. 1.07 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ!

ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ.. ಇಬ್ಬರ ಬಂಧನ!

ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ.. ಇಬ್ಬರ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅನ್ಯಗ್ರಹ ಜೀವಿಗಳು ಮನುಷ್ಯರ ಬಗ್ಗೆ ಏನೆಂದುಕೊಂಡಿರಬಹುದು? UFO ರಹಸ್ಯ ಬಯಲಿಗೆ ಟ್ರಂಪ್ ಆದೇಶ!

ಅನ್ಯಗ್ರಹ ಜೀವಿಗಳು ಮನುಷ್ಯರ ಬಗ್ಗೆ ಏನೆಂದುಕೊಂಡಿರಬಹುದು? UFO ರಹಸ್ಯ ಬಯಲಿಗೆ ಟ್ರಂಪ್ ಆದೇಶ!

ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್.. ಮುಂಬೈ ವಿರುದ್ದ ಡೆಲ್ಲಿಗೆ 6 ವಿಕೆಟ್‌ಗಳ ಜಯ!

ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್.. ಮುಂಬೈ ವಿರುದ್ದ ಡೆಲ್ಲಿಗೆ 6 ವಿಕೆಟ್‌ಗಳ ಜಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat