ಬೆಂಗಳೂರು: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್?
ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ದರಿಂದ ಈ 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ.
ಎಲ್ಲೆಲ್ಲಿ ಮಳೆ
ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ತುಮಕೂರು ಮತ್ತು ವಿಜಯನಗರದಲ್ಲಿ 30-40 ಕೀ.ಮಿ/ಗಂ ವೇಗದಲ್ಲಿ ಗಾಳಿ ಮಳೆ ಜೋರಾಗಿರಲಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ.



















