ಚಿತ್ರದುರ್ಗ: ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ.
ಬೆಂಗಳೂರು ಮೂಲದ ರವಿಚಂದ್ರ (40), ಸಂತೋಷ್ (25) ಸಾವನ್ನಪ್ಪಿದ ದುರ್ದೈವಿಗಳು. ಬೆಂಗಳೂರು ಕಡೆಯಿಂದ ಬಳ್ಳಾರಿ ಕಡೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಬಳ್ಳಾರಿ ಕಡೆಯಿಂದ ಚಳ್ಳಕೆರೆ ಕಡೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ನಡೆದಿದೆ.
ಸದ್ಯ ಘಟನಾ ಸ್ಥಳಕ್ಕೆ ರಾಂಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಘಟನಾ ಸಂಬಂಧ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ವಾಹನದ ನಂಬರ್ ಪ್ಲೇಟ್ ಬದಲಾಯಿಸಿ ಗೋ ಕಳ್ಳತನಕ್ಕೆ ಯತ್ನ!



















