ಬೆಂಗಳೂರು : ನೀವು ಉತ್ತರ ಕನ್ನಡ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇದೆ. ಉತ್ತರ ಕನ್ನಡದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Uttara Kannada Recruitment 2026) ಖಾಲಿ ಇರುವ 12 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಸ್ಪೆಷಲಿಸ್ಟ್ ಡಾಕ್ಟರ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉತ್ತರ ಕನ್ನಡ
ಹುದ್ದೆ ಹೆಸರು: ಸ್ಪೆಷಲಿಸ್ಟ್ ಡಾಕ್ಟರ್
ಒಟ್ಟು ಹುದ್ದೆ: 12
ಉದ್ಯೋಗ ಸ್ಥಳ: ಉತ್ತರ ಕನ್ನಡ, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
4 ಫಿಜಿಶಿಯನ್ ಹಾಗೂ 8 ಎಮರ್ಜೆನ್ಸಿ ಮೆಡಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರುಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸ್ನಾತಕೋತ್ತರ ಪದವಿ, ಎಂಬಿಬಿಎಸ್ ಕೋರ್ಸ್ ಮುಗಿಸಿರಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 60 ಸಾವಿರ ರೂಪಾಯಿಯಿಂದ 1.3 ಲಕ್ಷ ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ uttarakannada.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿ, ಅರ್ಜಿಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ District Health & Family Welfare Society Office, Karwar, Uttara Kannada ವಿಳಾಸಕ್ಕೆ ಕಳುಹಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಶೀಘ್ರದಲ್ಲೇ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 15 ಹುದ್ದೆಗಳ ನೇಮಕಾತಿ.. 54 ಸಾವಿರ ರೂ. ಸ್ಯಾಲರಿ!



















