ಚಿತ್ರದುರ್ಗ: ಭ್ರಷ್ಟಾಚಾರದ ಆರೋಪದ ಹಿನ್ನೆಲೆ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಸುಶೀಲಮ್ಮನ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಮಾಹಿತಿಯ ಪ್ರಕಾರ, ಸುಶೀಲಮ್ಮ ವರ್ಷಕ್ಕೂ ಮೊದಲು ವಿಆರ್‌ಎಸ್ ಪಡೆದಿದ್ದರು. ಆದರೆ, ಅಕೌಂಟೆಂಟ್ ಆಗಿದ್ದ ಅವಧಿಯಲ್ಲಿ ಆದಾಯ ಮೀರಿ ಆಸ್ತಿ ಸಂಪಾದನೆ ಮತ್ತು ಭ್ರಷ್ಟಾಚಾರ ನಡೆಸಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಲೋಕಾ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಚಿತ್ರದುರ್ಗದ ಮೆದೇಹಳ್ಳಿ ಬಡಾವಣೆಯಲ್ಲಿರುವ ಮನೆ ಹಾಗೂ ಹಿರಿಯೂರು ತಾಲೂಕಿನ ಯಾದಲಘಟ್ಟ ಗ್ರಾಮದ ತೋಟದ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.
ಈ ಕಾರ್ಯಾಚರಣೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ಅವರ ನೇತೃತ್ವದಲ್ಲಿ ನಡೆಯುತ್ತಿದೆ. ಅಧಿಕಾರಿಗಳು ದಾಖಲೆಗಳು ಮತ್ತು ಆಸ್ತಿಗಳ ಬಗ್ಗೆ ಪರಿಶೀಲನೆ ಮುಂದುವರೆಸಿದ್ದಾರೆ. ಪ್ರಾಥಮಿಕ ತನಿಖೆಯ ವಿವರಗಳು ಇನ್ನಷ್ಟೇ ಬಹಿರಂಗವಾಗಬೇಕಿದ್ದು, ದಾಳಿಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದೆ.
ಇದನ್ನೂ ಓದಿ : ವರ್ಷ ತುಂಬುವ ಮೊದಲೇ ಗಂಡನಿಗೆ ಚಟ್ಟ ಕಟ್ಟಿಸಿದ್ಲಾ ಹೆಂಡತಿ? ಕಾರು ಕೊಡಿಸುತ್ತೇನೆ ಅಂತ ಕರೆಸಿ ಬಾವನನ್ನೇ ಕೊಲೆಗೈದ ಬಾಮೈದ



















