ಬೆಂಗಳೂರು : ಕರ್ನಾಟಕದ ಬೆಂಗಳೂರು ಸೇರಿ ದೇಶದ ಹಲವೆಡೆ ಕಚೇರಿಗಳನ್ನು ಹೊಂದಿರುವ, ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆಯಾದ ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ ಸಂಸ್ಥೆಯಲ್ಲಿ ಖಾಲಿ ಇರುವ 6 ಹುದ್ದೆಗಳ ನೇಮಕಾತಿಗಾಗಿ (NBT India Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಆರು ರೀಜನಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ ಸಂಸ್ಥೆ: ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ
ಒಟ್ಟು ಹುದ್ದೆಗಳು: 6
ಉದ್ಯೋಗ ಸ್ಥಳ: ಬೆಂಗಳೂರು ಸೇರಿ ದೇಶದ ಹಲವೆಡೆ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಹುದ್ದೆಗಳ ಹೆಸರು: ರೀಜನಲ್ ಮ್ಯಾನೇಜರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 14
ಒಂದು ಜಾಯಿಂಟ್ ಡೈರೆಕ್ಟರ್, 2 ಡೆಪ್ಯುಟಿ ಡೈರೆಕ್ಟರ್ ಹಾಗೂ 3 ರೀಜನಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕದ ಬೆಂಗಳೂರು, ಪಶ್ಚಿಮ ಬಂಗಾಳದ ಕಲ್ಕತ್ತ, ಮಹಾರಾಷ್ಟ್ರದ ಪುಣೆಯಲ್ಲಿರುವ ಕಚೇರಿಗಳಲ್ಲಿ ನೇಮಕಾತಿ ನಡೆಯುತ್ತಿದೆ. ಅರ್ಜಿಗಳನ್ನು ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
• ಮೊದಲಿಗೆ nbtindia.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು
• ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆ ಓದಬೇಕು
• ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
• ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
• ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಂಡಿರಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
ಉಪ ನಿರ್ದೇಶಕರು (Establishment)
ನ್ಯಾಷನಲ್ ಬುಕ್ ಟ್ರಸ್ಟ್, ಇಂಡಿಯಾ
ನೆಹರು ಭವನ 5, ಇನ್ ಸ್ಟಿಟ್ಯೂಷನಲ್ ಏರಿಯಾ,
ಫೇಸ್-II, ವಸಂತ ಕುಂಜ್,
ನವದೆಹಲಿ – 110070
ಎನ್‌ಬಿಟಿ ಉದ್ದೇಶ
ನ್ಯಾಷನಲ್ ಬುಕ್ ಟ್ರಸ್ಟ್ ಕೇಂದ್ರ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಒಂದು ಸ್ವಾಯತ್ತ ಸಂಸ್ಥೆಯಾಗಿದೆ. 1957ರಲ್ಲಿ ಸ್ಥಾಪನೆಯಾದ ಈ ಸಂಸ್ಥೆಯ ಮುಖ್ಯ ಉದ್ದೇಶ ಭಾರತದಲ್ಲಿ ಪುಸ್ತಕ ಸಂಸ್ಕೃತಿಯನ್ನು ಬೆಳೆಸುವುದು ಮತ್ತು ಓದುವ ಹವ್ಯಾಸವನ್ನು ಉತ್ತೇಜಿಸುವುದಾಗಿದೆ. ಸಾಮಾನ್ಯ ಜನರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಪುಸ್ತಕಗಳನ್ನು ಒದಗಿಸುವುದು ಹಾಗೂ ಕನ್ನಡ ಸೇರಿ ಹಲವು ಭಾಷೆಯ ಪುಸ್ತಕಗಳನ್ನು ಪ್ರಕಟಿಸುವುದು ಸಂಸ್ಥೆಯ ಉದ್ದೇಶವಾಗಿದೆ.
ಇದನ್ನೂ ಓದಿ : ಶಬರಿಮಲೆಗೆ ಮಹಿಳೆಯರ ಪ್ರವೇಶ ನಿಷೇಧ ಲಿಂಗ ತಾರತಮ್ಯವಲ್ಲ, ಅದು ಸಂಪ್ರದಾಯ – ಸುಪ್ರೀಂಗೆ ಕೇಂದ್ರ ಸ್ಪಷ್ಟನೆ!



















