ಕಾರವಾರ : ಹಿಂದಿ ಹೇರಿಕೆ ವಿರೋಧಿಸಿ ಹಾಗೂ ರಾಜ್ಯಪಾಲರ ನಿಲುವಿಗೆ ಆಕ್ರೋಶ ವ್ಯಕ್ತಪಡಿಸಿ, ಕಾರವಾರದಲ್ಲಿ ಕನ್ನಡ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ್ದ ಪ್ರತಿಭಟನಾಕಾರರು, “ಕನ್ನಡ ವಿರೋಧಿ ರಾಜ್ಯಪಾಲರು” ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಹಿಂದಿ ವಿಚಾರದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ನಿಲುವನ್ನು ತೀವ್ರವಾಗಿ ವಿರೋಧಿಸಿದ ಕಾರ್ಯಕರ್ತರು, ರಾಜ್ಯದ ಭಾಷಾ ಗೌರವ ಕಾಪಾಡುವಂತೆ ಆಗ್ರಹಿಸಿದರು.
ಪ್ರತಿಭಟನೆಯ ವೇಳೆ, ರಾಜ್ಯಪಾಲರು ತಮ್ಮ ನಿಲುವು ತಕ್ಷಣ ಬದಲಿಸಬೇಕು, ಇಲ್ಲವಾದರೆ ಅವರನ್ನು ರಾಜ್ಯದಿಂದ ಹಿಂಪಡೆಯುವಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು. ಸ್ಥಳಕ್ಕೆ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇದನ್ನೂ ಓದಿ : ಗ್ಯಾಸ್ ಏಜೆನ್ಸಿಯಲ್ಲೇ ಸಾರಾಯಿ ಕುಡಿದು ಮಲಗಿದ ಸಿಬ್ಬಂದಿ



















