ಬೆಂಗಳೂರು : ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ (ADCL) ಸಂಸ್ಥೆಯಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ (Dr.B.R.ADCL Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಲೀಗಲ್ ಅಡ್ವೈಸರ್ ಹಾಗೂ ಕಂಪನಿ ಸೆಕ್ರೆಟರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿಯ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ (ADCL)
ಒಟ್ಟು ಹುದ್ದೆಗಳು: 02
ಹುದ್ದೆಗಳ ಹೆಸರು: ಲೀಗಲ್ ಅಡ್ವೈಸರ್ ಹಾಗೂ ಕಂಪನಿ ಸೆಕ್ರೆಟರಿ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 21
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಲ್ ಎಲ್ ಬಿ, ಪದವಿ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಲೀಗಲ್ ಅಡ್ವೈಸರ್ ಹುದ್ದೆಗೆ ಗರಿಷ್ಠ 80 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಕಂಪನಿ ಸೆಕ್ರೆಟರಿ ಹುದ್ದೆಗೆ 35 ವರ್ಷಗಳ ವಯೋಮಿತಿ ಇದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು adcl.karnataka.gov.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ವ್ಯವಸ್ಥಾಪಕ ನಿರ್ದೇಶಕರು
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ,
ವಿಶ್ವೇಶ್ವರಯ್ಯ ಮೇನ್ ಟವರ್ (ವಿ.ವಿ. ಟವರ್), 9ನೇ ಮಹಡಿ,
ಅಂಬೇಡ್ಕರ್ ವೀಧಿ, ಬೆಂಗಳೂರು – 560001.
ಇದನ್ನೂ ಓದಿ : ಕಿಡ್ನಿ ಕೊಡು, ಇಲ್ಲವೇ 30 ಲಕ್ಷ ತಂದುಕೊಡು – ವಿವಾಹಿತೆಗೆ ಪತಿಯ ಕುಟುಂಬದಿಂದ ವರದಕ್ಷಿಣೆ ಕಿರುಕುಳ!



















