ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಸಿಎಸ್‌ಕೆಗೆ ಆರಂಭಿಕರದ್ದೇ ದೊಡ್ಡ ತಲೆನೋವು : ರುತುರಾಜ್-ಸ್ಯಾಮ್ಸನ್ ಕಳಪೆ ಫಾರ್ಮ್ ಬಗ್ಗೆ ಕಳವಳ ವ್ಯಕ್ತಪಡಿಸಿದ ಅನಿಲ್ ಕುಂಬ್ಳೆ!

April 7, 2026
Share on WhatsappShare on FacebookShare on Twitter

ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲೇ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ), 2026ರ ಆವೃತ್ತಿಯಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸತತ ಮೂರು ಪಂದ್ಯಗಳಲ್ಲಿ ಹೀನಾಯ ಸೋಲು ಅನುಭವಿಸಿರುವ ಎಂಎಸ್ ಧೋನಿ ಬಳಗ, ಇದೀಗ ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದಿದೆ. ಟೂರ್ನಿಗೂ ಮುನ್ನವೇ ಭಾರಿ ನಿರೀಕ್ಷೆ ಹುಟ್ಟುಹಾಕಿದ್ದ ಸಿಎಸ್‌ಕೆ ತಂಡದ ಈ ಕಳಪೆ ಪ್ರದರ್ಶನ ಅಭಿಮಾನಿಗಳಿಗೆ ಹಾಗೂ ಕ್ರಿಕೆಟ್ ಪಂಡಿತರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಈ ಸರಣಿ ಸೋಲುಗಳಿಗೆ ತಂಡದ ಅಗ್ರ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯವೇ ಪ್ರಮುಖ ಕಾರಣ ಎಂದು ವಿಶ್ಲೇಷಿಸಲಾಗುತ್ತಿದ್ದು, ನಾಯಕ ರುತುರಾಜ್ ಗಾಯಕ್ವಾಡ್ ಮತ್ತು ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್ ಅವರ ಕಳಪೆ ಫಾರ್ಮ್ ಬಗ್ಗೆ ಟೀಮ್ ಇಂಡಿಯಾದ ಮಾಜಿ ದಿಗ್ಗಜ ಅನಿಲ್ ಕುಂಬ್ಳೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಬಾರಿಯ ಐಪಿಎಲ್ ಹರಾಜು ಪ್ರಕ್ರಿಯೆಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತೆಗೆದುಕೊಂಡಿದ್ದ ಒಂದು ಬೃಹತ್ ನಿರ್ಧಾರ ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸಿತ್ತು. ತಂಡದ ಪ್ರಮುಖ ಆಟಗಾರರಾದ ರವೀಂದ್ರ ಜಡೇಜಾ ಮತ್ತು ಸ್ಯಾಮ್ ಕರನ್ ಅವರನ್ನು ಬಿಟ್ಟುಕೊಟ್ಟು, ಅವರ ಬದಲಿಗೆ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ತಂಡಕ್ಕೆ ಕರೆತರಲಾಗಿತ್ತು. ಎಂಎಸ್ ಧೋನಿ ಅವರ ಉತ್ತರಾಧಿಕಾರಿ ಎಂದೇ ಬಿಂಬಿತವಾಗಿದ್ದ ಸ್ಯಾಮ್ಸನ್ ಮೇಲೆ ಸಿಎಸ್‌ಕೆ ಮ್ಯಾನೇಜ್ಮೆಂಟ್ ಹಾಗೂ ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಸ್ಯಾಮ್ಸನ್ ಇಲ್ಲಿಯವರೆಗೂ ಆ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ.

ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಅವರು, ಸ್ಥಿರತೆಯ ಕೊರತೆಯಿಂದ ಬಳಲುತ್ತಿದ್ದಾರೆ. ಸಿಎಸ್‌ಕೆ ಪರ ಆಡಿದ ಮೊದಲ ಮೂರೂ ಪಂದ್ಯಗಳಲ್ಲಿ ಅವರು ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ.

ಋತುರಾಜ್​ಗೂ ಕಷ್ಟ

ಇನ್ನೊಂದೆಡೆ, ತಂಡದ ನಾಯಕ ಹಾಗೂ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಅವರ ಪರಿಸ್ಥಿತಿಯೂ ಭಿನ್ನವಾಗಿಲ್ಲ. ೨೦೨೪ರಲ್ಲಿ ಚೆನ್ನೈ ತಂಡದ ನಾಯಕತ್ವ ವಹಿಸಿಕೊಂಡಿದ್ದ ಗಾಯಕ್ವಾಡ್, ಸತತ 7 ಪಂದ್ಯಗಳಲ್ಲಿ ಸೋಲಿನ ರುಚಿ ಕಂಡಿದ್ದರು. ಈ ಬಾರಿಯ ಆವೃತ್ತಿಯಲ್ಲೂ ಅವರ ಬ್ಯಾಟ್‌ನಿಂದ ರನ್‌ಗಳ ಹೊಳೆ ಹರಿಯುತ್ತಿಲ್ಲ. ಈ ಸೀಸನ್‌ನ ಮೊದಲ ಮೂರು ಪಂದ್ಯಗಳಿಂದ ಅವರು ಕೇವಲ ೪೧ ರನ್‌ಗಳನ್ನಷ್ಟೇ ಕಲೆಹಾಕಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ರನ್‌ಗಳ ಸುರಿಮಳೆಗೈದಿರುವ, ಅಪಾರ ಅನುಭವ ಹೊಂದಿರುವ ಈ ಇಬ್ಬರು ಆಟಗಾರರಿಗೆ ಸಿಎಸ್‌ಕೆ ಆಡಳಿತ ಮಂಡಳಿ ಸಂಪೂರ್ಣ ಬೆಂಬಲ ನೀಡಿದ್ದರೂ, ಅದಕ್ಕೆ ತಕ್ಕ ಪ್ರತಿಫಲ ಮಾತ್ರ ಮೈದಾನದಲ್ಲಿ ಸಿಗುತ್ತಿಲ್ಲ. ಸ್ಯಾಮ್ಸನ್ ಮತ್ತು ಗಾಯಕ್ವಾಡ್ ಜೋಡಿಯು ಈ ಮೂರು ಪಂದ್ಯಗಳಿಂದ ಒಟ್ಟಾರೆಯಾಗಿ ಸೇರಿಸಿದ್ದು ಕೇವಲ ೬೨ ರನ್‌ಗಳನ್ನು ಮಾತ್ರ. ಈ ಕಳಪೆ ಆರಂಭವೇ ತಂಡದ ಸತತ ಸೋಲುಗಳಿಗೆ ಪ್ರಮುಖ ಕಾರಣವಾಗಿದೆ.

ಸ್ಟಾರ್ ಸ್ಪೋರ್ಟ್ಸ್ ಜೊತೆಗಿನ ಚರ್ಚೆಯ ವೇಳೆ ಈ ವಿಚಾರವನ್ನು ಪ್ರಸ್ತಾಪಿಸಿದ ಅನಿಲ್ ಕುಂಬ್ಳೆ, ಚೆನ್ನೈ ತಂಡದ ಪ್ರಸ್ತುತ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಬೆಳಕು ಚೆಲ್ಲಿದ್ದಾರೆ. “ಚೆನ್ನೈ ತಂಡಕ್ಕೆ ಇದೊಂದು ಬೃಹತ್ ಸಮಸ್ಯೆಯಾಗಿ ಪರಿಣಮಿಸಿದೆ. ತಂಡದ ಅತ್ಯಂತ ಅನುಭವಿ ಬ್ಯಾಟರ್‌ಗಳಾದ ಸಂಜು ಸ್ಯಾಮ್ಸನ್ ಮತ್ತು ರುತುರಾಜ್ ಗಾಯಕ್ವಾಡ್ ಮೊದಲ ಮೂರು ಪಂದ್ಯಗಳಲ್ಲಿ ವಿಫಲರಾಗಿರುವುದು ನಿಜಕ್ಕೂ ಒಂದು ಗಂಭೀರ ಸವಾಲು. ಪ್ರಸ್ತುತ ಪುನರ್ವಸತಿ ಪ್ರಕ್ರಿಯೆಯಲ್ಲಿರುವ ಎಂಎಸ್ ಧೋನಿ ಹಾಗೂ ಸ್ಯಾಮ್ಸನ್ ಅವರನ್ನು ಹೊರತುಪಡಿಸಿದರೆ, ಉಳಿದ ಬ್ಯಾಟಿಂಗ್ ಲೈನ್-ಅಪ್ ಅತ್ಯಂತ ಕಿರಿಯ ಹಾಗೂ ಅನನುಭವಿ ಆಟಗಾರರಿಂದ ಕೂಡಿದೆ” ಎಂದು ಕುಂಬ್ಳೆ ವಿಶ್ಲೇಷಿಸಿದ್ದಾರೆ. ಅನುಭವಿ ಆಟಗಾರರೇ ಜವಾಬ್ದಾರಿ ತೆಗೆದುಕೊಳ್ಳದಿದ್ದರೆ ಯುವ ಆಟಗಾರರ ಮೇಲೆ ಅತಿಯಾದ ಒತ್ತಡ ಬೀಳುತ್ತದೆ ಎಂಬುದು ಅವರ ವಾದವಾಗಿದೆ.

ಮುಂದುವರಿದು ಮಾತನಾಡಿದ ಅವರು, “ಇಂತಹ ಪರಿಸ್ಥಿತಿಯಲ್ಲಿ ತಂಡದ ಅನುಭವಿ ಬ್ಯಾಟರ್‌ಗಳ ಪೈಕಿ ಕನಿಷ್ಠ ಒಬ್ಬರಾದರೂ ಜವಾಬ್ದಾರಿಯುತವಾಗಿ ಆಡಿ ದೊಡ್ಡ ಇನ್ನಿಂಗ್ಸ್ ಕಟ್ಟಬೇಕಾದ ಅಗತ್ಯವಿದೆ. ದುರದೃಷ್ಟವಶಾತ್, ಮೊದಲ ಮೂರು ಪಂದ್ಯಗಳಲ್ಲಿ ಚೆನ್ನೈ ಪರವಾಗಿ ಯಾವುದೂ ಕೂಡ ಸರಿಯಾಗಿ ನಡೆದಿಲ್ಲ. ಟೂರ್ನಿ ಈಗಷ್ಟೇ ಆರಂಭವಾಗಿರುವುದರಿಂದ ತಪ್ಪುಗಳನ್ನು ತಿದ್ದಿಕೊಳ್ಳಲು ಅವಕಾಶವಿದೆ. ಆದರೆ, ಅವರು ಆದಷ್ಟು ಬೇಗ ತಮ್ಮ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಬೇಕಾಗಿದೆ” ಎಂದು ಕುಂಬ್ಳೆ ಎಚ್ಚರಿಕೆ ನೀಡಿದ್ದಾರೆ. ಸದ್ಯ ಅಂಕಪಟ್ಟಿಯಲ್ಲಿ ತಳಮಟ್ಟದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್, ತನ್ನ ಮುಂದಿನ ಪಂದ್ಯದಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡವನ್ನು ಎದುರಿಸಲಿದೆ.

ಇದನ್ನೂ ಓದಿ : IPL ಹಿಂದಿಕ್ಕುವ ಕನಸಿನಲ್ಲಿ ಪಾಕಿಸ್ತಾನ : PSL ವಿಶ್ವದ ನಂಬರ್ 1 ಲೀಗ್ ಆಗಲಿದೆ ಎಂದ ಪಿಸಿಬಿ ಮುಖ್ಯಸ್ಥ!

Tags: CricketIndiaKarnataka News beat
SendShareTweet
Previous Post

ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ನೇಮಕಾತಿ.. ಕಾನೂನು ಪದವೀಧರರಿಗೆ ಒಳ್ಳೆಯ ಅವಕಾಶ!

Next Post

ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ – ತಂದೆ, ಮಗಳು ಸ್ಥಳದಲ್ಲೇ ಸಾವು!

Related Posts

2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!
ಕ್ರೀಡೆ

2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!

‘ಫ್ಯಾಬ್‌ ಫೋರ್‌’ಗಿಂತ ಜಡೇಜಾನೇ ಬೆಸ್ಟ್‌ ಎಂದ ದಿಗ್ಗಜ ; ‘ಸಂಪೂರ್ಣ ಆಲ್‌ರೌಂಡರ್‌’ ಎಂದು ಹಾಡಿಹೊಗಳಿದ ಜೆಫ್ರಿ!
ಕ್ರೀಡೆ

‘ಫ್ಯಾಬ್‌ ಫೋರ್‌’ಗಿಂತ ಜಡೇಜಾನೇ ಬೆಸ್ಟ್‌ ಎಂದ ದಿಗ್ಗಜ ; ‘ಸಂಪೂರ್ಣ ಆಲ್‌ರೌಂಡರ್‌’ ಎಂದು ಹಾಡಿಹೊಗಳಿದ ಜೆಫ್ರಿ!

ದ್ರಾವಿಡ್-ಅಶ್ವಿನ್ ಜೋಡಿಗೆ ಗೆಲುವಿನ ಬರ : ಸತತ 4ನೇ ಸೋಲು, ಡಬ್ಲಿನ್ ಗಾರ್ಡಿಯನ್ಸ್ ಸಂಕಷ್ಟದಲ್ಲಿ!
ಕ್ರೀಡೆ

ದ್ರಾವಿಡ್-ಅಶ್ವಿನ್ ಜೋಡಿಗೆ ಗೆಲುವಿನ ಬರ : ಸತತ 4ನೇ ಸೋಲು, ಡಬ್ಲಿನ್ ಗಾರ್ಡಿಯನ್ಸ್ ಸಂಕಷ್ಟದಲ್ಲಿ!

ಭಾರತದಲ್ಲಿ ಮೊದಲ ಮಹಿಳಾ ಚಾಂಪಿಯನ್ಸ್ ಟ್ರೋಫಿ ; ಮುಂಬೈ, ವಡೋದರ ಆತಿಥ್ಯ!
ಕ್ರೀಡೆ

ಭಾರತದಲ್ಲಿ ಮೊದಲ ಮಹಿಳಾ ಚಾಂಪಿಯನ್ಸ್ ಟ್ರೋಫಿ ; ಮುಂಬೈ, ವಡೋದರ ಆತಿಥ್ಯ!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!
ಕ್ರೀಡೆ

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

ಅಗರ್ಕರ್ ಭವಿಷ್ಯಕ್ಕೆ ನಿರ್ಣಾಯಕ ಸಭೆ : ಮುಖ್ಯ ಆಯ್ಕೆಗಾರರ ಹುದ್ದೆಯಲ್ಲಿ ಮುಂದುವರಿಕೆ ಬಗ್ಗೆ BCCI ಮಹತ್ವದ ತೀರ್ಮಾನ?
ಕ್ರೀಡೆ

ಅಗರ್ಕರ್ ಭವಿಷ್ಯಕ್ಕೆ ನಿರ್ಣಾಯಕ ಸಭೆ : ಮುಖ್ಯ ಆಯ್ಕೆಗಾರರ ಹುದ್ದೆಯಲ್ಲಿ ಮುಂದುವರಿಕೆ ಬಗ್ಗೆ BCCI ಮಹತ್ವದ ತೀರ್ಮಾನ?

Next Post
ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ – ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ - ತಂದೆ, ಮಗಳು ಸ್ಥಳದಲ್ಲೇ ಸಾವು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!

2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat