ಬೆಂಗಳೂರು: ಹುಟ್ಟುಹಬ್ಬದ ಸಂಭ್ರಮದ ಹೆಸರಿನಲ್ಲಿ ಕಾಲೇಜು ವಿದ್ಯಾರ್ಥಿಗಳು ನಡು ರಸ್ತೆಯಲ್ಲೇ ಪಟಾಕಿ ಸಿಡಿಸಿ ಹುಚ್ಚಾಟ ನಡೆಸಿದ ಘಟನೆ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆವಲಹಳ್ಳಿ ಬಳಿಯ ಈಸ್ಟ್ ಎಂಡ್ ಕಾಲೇಜಿನ ವಿದ್ಯಾರ್ಥಿಗಳು ಹಾಡಹಗಲೇ ರಸ್ತೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದಾರೆ. ಈ ವೇಳೆ ರಸ್ತೆ ಮೇಲೆ ವಾಹನಗಳ ಸಂಚಾರ ನಡೆಯುತ್ತಿದ್ದರೂ ಯಾವುದೇ ಪರಿಗಣನೆ ಇಲ್ಲದೇ ವಿದ್ಯಾರ್ಥಿಗಳು ಪಟಾಕಿ ಸಿಡಿಸಿದ್ದು, ಅಪಾಯಕಾರಿಯ ಪರಿಸ್ಥಿತಿ ನಿರ್ಮಾಣವಾಗಿದೆ.
ಪೊಲೀಸರ ಭಯವಿಲ್ಲದೇ ರಾಜಾರೋಷವಾಗಿ ವಿದ್ಯಾರ್ಥಿಗಳು ರಸ್ತೆಯಲ್ಲೇ ಪಟಾಕಿ ಸಿಡಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ವಾಹನ ಸವಾರರು ಮತ್ತು ಪಾದಚಾರಿಗಳು ಭಯಭೀತರಾಗಿದ್ದು, ಕೆಲ ಕಾಲ ಟ್ರಾಫಿಕ್ ಕೂಡ ಅಸ್ತವ್ಯಸ್ತಗೊಂಡಿದೆ. ವಿದ್ಯಾರ್ಥಿಗಳ ಈ ವರ್ತನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಕುಡಿತದ ನಶೆಯೋ ಅಥವಾ ಡ್ರಗ್ಸ್ ನಶೆಯೋ? ನಡುರಸ್ತೆಯಲ್ಲೇ ಮೈ ಮೇಲೆ ಪ್ರಜ್ಞೆ ಇಲ್ಲದೇ ನಿಂತ ವ್ಯಕ್ತಿ


















