ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಆರ್ಯಭಟ್ಟ ರಿಸರ್ಚ್ ಇನ್ ಸ್ಟಿಟ್ಯೂಟ್ ಆಫ್ ಅಬ್ಸರ್ವೇಶನಲ್ ಸೈನ್ಸಸ್ (Aryabhatta Research Institute of Observational Sciences ) ಸಂಸ್ಥೆಯಲ್ಲಿ ಖಾಲಿ ಇರುವ ಒಂದು ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಂದು ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ
ನೇಮಕಾತಿ ಸಂಸ್ಥೆ: ಆರ್ಯಭಟ್ಟ ರಿಸರ್ಚ್ ಇನ್ ಸ್ಟಿಟ್ಯೂಟ್ ಆಫ್ ಅಬ್ಸರ್ವೇಶನಲ್ ಸೈನ್ಸಸ್
ಒಟ್ಟು ಹುದ್ದೆಗಳು: 01
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಇ-ಮೇಲ್
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 16
ಮೆಕ್ಯಾನಿಕಲ್ ವಿಭಾಗದಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 35 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಬಿ.ಇ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕ ಸಂದರ್ಶನದ ದಿನಾಂಕ ಘೋಷಣೆ ಮಾಡಿ, ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ. ಕರ್ನಾಟಕದ ಬೆಂಗಳೂರಿನಲ್ಲೇ ಉದ್ಯೋಗ ಹುಡುಕುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ kumar@aries.res.inಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಅರ್ಜಿ ಹಾಗೂ ದಾಖಲೆಗಳ ಸಾಫ್ಟ್ ಕಾಪಿಗಳನ್ನು kumar@aries.res.in, tskumar@gmail.com ಗೆ ಕಳುಹಿಸಬೇಕು
ಇದನ್ನೂ ಓದಿ : 90 ನಿಮಿಷಗಳ ಅಂತರದಲ್ಲಿ ತಪ್ಪಿದ ಮಹಾಯುದ್ಧ.. ಕೊನೇ ಕ್ಷಣದಲ್ಲಿ ನಿರ್ಧಾರ ಬದಲಿಸಿದ ಟ್ರಂಪ್!



















