ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಭೀಕರ ಘಟನೆ ನಡೆದಿದ್ದು, ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ ಕಾರು ಹಾಗೂ ಅದರ ಚಾಲಕ ಸುಟ್ಟು ಕರಕಲಾಗಿದ್ದಾರೆ.
ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ವೋಕ್ಸ್ ವ್ಯಾಗನ್ ಕಂಪನಿಯ ಕಾರಿನಲ್ಲಿ ಚಲಿಸುತ್ತಿರುವಾಗ ಈ ಅವಘಡ ಸಂಭವಿಸಿದೆ. ಬೆಂಕಿಯ ತೀವ್ರತೆಗೆ ಚಾಲಕನ ಗುರುತು ಸಹ ಸಿಗದಂತೆ ದೇಹ ಸುಟ್ಟು ಕರಕಲಾಗಿದೆ.
ರಾಷ್ಟ್ರೀಯ ಹೆದ್ದಾರಿ 52ರಲ್ಲಿ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಘಟನೆಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ : ಚಲಿಸುತ್ತಿದ್ದ ಬೈಕಿನ ಚಕ್ರಕ್ಕೆ ಸೀರೆಯ ಸೆರಗು ಸಿಲುಕಿ ಮಹಿಳೆ ಸಾವು!



















