ಬೆಂಗಳೂರು : ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಸುಮನಹಳ್ಳಿ ಬ್ರಿಡ್ಜ್ ಬಳಿ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗಳಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ.
ಬ್ರಿಡ್ಜ್ ಕೆಳಭಾಗದಲ್ಲಿ ಪೇಯ್ಡ್ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಸವಾರರು ತಮ್ಮ ವಾಹನಗಳನ್ನು ನಿಲ್ಲಿಸಿ ತೆರಳುವ ಸಂದರ್ಭದಲ್ಲೇ ಈ ಅವಘಡ ಸಂಭವಿಸಿದೆ. ಮೊದಲು ಒಂದು ಬೈಕ್‌ನಲ್ಲಿ ಕಾಣಿಸಿಕೊಂಡ ಬೆಂಕಿ ನಂತರ ನಾಲ್ಕೈದು ಬೈಕ್‌ಗಳಿಗೆ ವ್ಯಾಪಿಸಿದೆ.
ಸ್ಥಳೀಯರು ಹಾಗೂ ಕಾಮಾಕ್ಷಿಪಾಳ್ಯ ಪೊಲೀಸರು ತಕ್ಷಣ ಬೆಂಕಿ ನಂದಿಸಲು ಮುಂದಾಗಿ, ಅಕ್ಕಪಕ್ಕದ ವಾಹನಗಳನ್ನು ಬೇರೆಡೆಗೆ ಸ್ಥಳಾಂತರಿಸಿದರು. ಅಗ್ನಿಶಾಮಕ ದಳಕ್ಕೂ ಮಾಹಿತಿ ನೀಡಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ, ಕೆಲ ಬೈಕ್‌ಗಳು ಹಾನಿಗೊಳಗಾಗಿವೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
ಇದನ್ನೂ ಓದಿ : ಆಕಸ್ಮಿಕ ಬೆಂಕಿ.. ಕಾರಿನೊಂದಿಗೆ ಚಾಲಕನೂ ಸುಟ್ಟು ಕರಕಲು


















