ದಾವಣಗೆರೆ/ಬಾಗಲಕೋಟೆ: ಕರ್ನಾಟಕದಲ್ಲಿ ನಡೆಯುತ್ತಿರುವ ಉಪಚುನಾವಣೆಗಳು ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿವೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.
ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಹಾಗೂ ಎಚ್. ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನಗಳಿಗೆ ಉಪಚುನಾವಣೆ ಘೋಷಿಸಲಾಗಿದ್ದು, ಇಂದು ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಫಲಿತಾಂಶ ಯಾರ ಪರವಾಗಲಿದೆ ಎಂಬುದರ ಮೇಲೆ ರಾಜಕೀಯ ವಲಯದ ಕಣ್ಣು ನೆಟ್ಟಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಎರಡೂ ಕ್ಷೇತ್ರಗಳು ಪ್ರತಿಷ್ಠೆಯ ಕಣವಾಗಿದ್ದು, ಮತ್ತೊಂದೆಡೆ ಬಿಜೆಪಿ ಕೂಡ ಗೆಲುವಿಗಾಗಿ ಭರ್ಜರಿ ಪೈಪೋಟಿ ನೀಡುತ್ತಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರ
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಕಣಕ್ಕಿಳಿದಿದ್ದಾರೆ. ಬಿಜೆಪಿಯಿಂದ ಶ್ರೀನಿವಾಸ್ ಟಿ. ದಾಸಕರಿಯಪ್ಪ ಸ್ಪರ್ಧಿಸುತ್ತಿದ್ದಾರೆ. ಒಟ್ಟು 14 ಅಭ್ಯರ್ಥಿಗಳು ಈ ಕ್ಷೇತ್ರದಲ್ಲಿ ಭಾಗ್ಯ ಪರೀಕ್ಷೆ ಎದುರಿಸುತ್ತಿದ್ದಾರೆ.
ಬಾಗಲಕೋಟೆ ಕ್ಷೇತ್ರ
ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಉಮೇಶ್ ಮೇಟಿ ಹಾಗೂ ಬಿಜೆಪಿಯಿಂದ ವೀರಣ್ಣ ಚರಂತಿಮಠ ಪ್ರಮುಖ ಪೈಪೋಟಿದಾರರಾಗಿದ್ದಾರೆ. ಈ ಕ್ಷೇತ್ರದಲ್ಲಿ ಒಟ್ಟು 20 ಅಭ್ಯರ್ಥಿಗಳು ಕಣದಲ್ಲಿದ್ದು, ಮತದಾರರ ತೀರ್ಮಾನಕ್ಕಾಗಿ ಕಾಯುತ್ತಿದ್ದಾರೆ. ಎರಡೂ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದ ಭವಿಷ್ಯ ದಿಕ್ಕು ನಿರ್ಧರಿಸುವಲ್ಲಿ ಮಹತ್ವದ ಪಾತ್ರವಹಿಸುವ ಸಾಧ್ಯತೆ ಇದೆ.
ಇದನ್ನೂ ಓದಿ : ‘ಓಪನ್ ಏರ್ ಫಿಟ್ನೆಸ್ ಜಿಮ್’ ಉದ್ಘಾಟಿಸಿದ ಶಾಸಕ ಅಶ್ವಥ್ ನಾರಾಯಣ್


















