ಮಂಗಳೂರು : 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ 600ಕ್ಕೆ 600 ಅಂಕ ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ಕಲಾ ವಿಭಾಗದ ಇಬ್ಬರು ವಿದ್ಯಾರ್ಥಿನಿಯರು 598 ಅಂಕಗಳನ್ನು ಪಡೆಯುವ ಮೂಲಕ ದ್ವಿತೀಯ ಸ್ಥಾನ ಹಂಚಿಕೊಂಡಿದ್ದಾರೆ.
ಮೂಡಬಿದ್ರೆ ನಿವಾಸಿ ಆಗಿರುವ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕ ಪಡೆದುಕೊಂಡಿದ್ದಾರೆ. ಇನ್ನೂ ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಾದ ಸಂಗೀತಾ ಹಾಗೂ ಅರ್ಚನಾ ಕಲಾ ವಿಭಾಗದಲ್ಲಿ ತಲಾ 598 ಅಂಕ ಪಡೆದು ಸಾಧನೆ ಮಾಡಿದ್ದಾರೆ.
ಇದನ್ನೂ ಓದಿ : 10 ವರ್ಷಗಳ ‘ಮಹಾಭಾರತ’ ಸದೃಶ ದಾಂಪತ್ಯ ಕಲಹಕ್ಕೆ ಸುಪ್ರೀಂ ತೆರೆ.. 5 ಕೋಟಿ ರೂ. ಪರಿಹಾರ, ವಿಚ್ಛೇದನಕ್ಕೆ ಆದೇಶ!



















