ಶಿವಮೊಗ್ಗ : ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ 6ನೇ ತರಗತಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿರುವ ಘಟನೆ ಶಿವಮೊಗ್ಗದ ಬೊಮ್ಮನಕಟ್ಟೆ ಪ್ರದೇಶದ ಎ ಬ್ಲಾಕ್‌ನಲ್ಲಿ ನಡೆದಿದೆ.
ಜೀವಿತ (12) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಾಲಕಿ. ಬೊಮ್ಮನಕಟ್ಟೆಯ ಶಾಲೆಯಲ್ಲಿ ಜೀವಿತ ಆರನೇ ತರಗತಿ ಓದುತ್ತಿದ್ದಳು ರಜೆ ಇದ್ದ ಕಾರಣ ವಿದ್ಯಾರ್ಥಿ ಜೀವಿತ ಮನೆಯಲ್ಲಿಯೇ ಇದ್ದಳು. ಬಾಲಕಿ ಜೀವಿತ ಸಾವಿನ ಬಗ್ಗೆ ಹಲವಾರು ಅನುಮಾನ ವ್ಯಕ್ತವಾಗುತ್ತಿದೆ.
ಬಾಲಕಿಯ ತಾಯಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಾರೆ. ಕೆಲಸ ಮುಗಿಸಿ ಮನೆಗೆ ಬಂದ ಪೋಷಕರು ಕಂಗಲಾಗಿ ಸ್ಥಳೀಯ ಆಸ್ಪತ್ರೆಗೆ ಕೆರೆದೊಯ್ದಿದ್ದಾರೆ. ಅಷ್ಟರಲ್ಲೇ ಬಾಲಕಿ ಸಾವನ್ನಪ್ಪಿದ್ದಾಲೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನಾ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ.. 55 ಸಾವಿರ ರೂ. ಸಂಬಳ!



















