ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಕೇಂದ್ರ ಸರ್ಕಾರದ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತ ಸಂಸ್ಥೆಯಲ್ಲಿ (K-RIDE Recruitment 2026) ಖಾಲಿ ಇರುವ 11 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 11 ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ನೇಮಕಾತಿ ಸಂಸ್ಥೆ: ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತ (K-RIDE)
ಹುದ್ದೆಗಳ ಹೆಸರು: ಮ್ಯಾನೇಜರ್
ಹುದ್ದೆಗಳ ಸಂಖ್ಯೆ: 11
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 6
ಜನರಲ್ ಮ್ಯಾನೇಜರ್, ಅಡಿಷನಲ್ ಜನರಲ್ ಮ್ಯಾನೇಜರ್, ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 53 ಸಾವಿರ ರೂಪಾಯಿಯಿಂದ 2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ, ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 57 ವರ್ಷಗಳ ವಯೋಮಿತಿ ಇದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಶಾರ್ಟ್ ಲಿಸ್ಟಿಂಗ್, ಸ್ಕ್ರೀನಿಂಗ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ kride.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅಪ್ ಲೋಡ್ ಮಾಡಬೇಕು.
ಇದನ್ನೂ ಓದಿ : ಹುಲಿಕಲ್ ಘಾಟ್ ದುರಂತ – ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ!



















