ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ ಖಾಲಿ ಇರುವ 153 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (National Informatics Centre Recruitment 2026) ಹೊರಡಿಸಲಾಗಿದೆ. ಒಟ್ಟು 153 ಸೈಂಟಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ? ವಿದ್ಯಾರ್ಹತೆ ಏನು ಎಂಬಿತ್ಯಾದಿ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾಹಿತಿ ಕೇಂದ್ರ
ಹುದ್ದೆಗಳ ಹೆಸರು: ಸೈಂಟಿಸ್ಟ್
ಒಟ್ಟು ಹುದ್ದೆಗಳು: 153
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 30
12 ಸೈಂಟಿಸ್ಟ್ ಡಿ ಹಾಗೂ 141 ಸೈಂಟಿಸ್ಟ್ ಸಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಪೂರ್ಣಗೊಳಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 67 ಸಾವಿರ ರೂಪಾಯಿಯಿಂದ 2.08 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಆನ್ ಲೈನ್ ಪರೀಕ್ಷೆ, ಸ್ಕ್ರೀನಿಂಗ್ ಟೆಸ್ಟ್, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದವರಿಗೆ 800 ರೂಪಾಯಿ ಅರ್ಜಿ ಶುಲ್ಕವಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ nic.gov.in ಗೆ ಭೇಟಿ ನೀಡಬೇಕು
ನಿಮಗೆ ಹುದ್ದೆಯ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು
ಇದನ್ನೂ ಓದಿ : ಹಾವೇರಿಯ ಲಾಡ್ಜ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ!



















