ಗದಗ: ಜಿಲ್ಲೆಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಪ್ರಕರಣ ಬೆಳಕಿಗೆ ಬಂದಿದ್ದು, ಅಬಕಾರಿ ಇಲಾಖೆ ದಾಳಿ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ.
ಲಕ್ಷ್ಮೇಶ್ವರ ತಾಲೂಕಿನ ಗುಳಗುಂಜಿಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗೂಳಪ್ಪ ಎಂಬ ವ್ಯಕ್ತಿ ತನ್ನ ತೋಟದ ಮನೆಯ ಪಕ್ಕದಲ್ಲಿ ಅಕ್ರಮವಾಗಿ 126 ಗಾಂಜಾ ಗಿಡಗಳನ್ನು ಬೆಳೆದಿದ್ದಾನೆ ಎಂದು ತಿಳಿದುಬಂದಿದೆ.
ಖಚಿತ ಮಾಹಿತಿಯ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯನ್ನು ಗದಗ ಅಬಕಾರಿ ಡಿಸಿ ಲಕ್ಷ್ಮೀ ಅವರ ಮಾರ್ಗದರ್ಶನದಲ್ಲಿ ನಡೆಸಲಾಗಿದೆ.
ಈ ವೇಳೆ ಅಧಿಕಾರಿಗಳು ಸುಮಾರು 126 ಗಾಂಜಾ ಗಿಡಗಳನ್ನು ಹಾಗೂ 428 ಗ್ರಾಂ ಒಣ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಅಬಕಾರಿ ಇಲಾಖೆಯ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ಮುಂದಿನ ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಜಿಎಂ ಸಕ್ಕರೆ ಕಾರ್ಖಾನೆ ವಿರುದ್ಧ ಬೆಳಗಾವಿ ರೈತರ ಆಕ್ರೋಶ!



















