ದಕ್ಷಿಣ ಕನ್ನಡ : ಯುವ ನಿರೂಪಕನೋರ್ವ ಮದುವೆಯ ಮೆಹಂದಿ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ನಡೆದಿದೆ.
ಫರಂಗಿಪೇಟೆ ಅಬ್ಬೆಟ್ಟು ನಿವಾಸಿ ಅಶ್ವಿಥ್ (32) ಮೃತ ನಿರೂಪಕ. ತನ್ನ ಸಂಬಂಧಿಕರ ಮದುವೆಯ ಮೆಹಂದಿ ಕಾರ್ಯಕ್ರಮದ ಸಂಭ್ರಮ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ನಿರೂಪಣೆ ಮಾಡಲೆಂದು ವೇದಿಕೆಯನ್ನು ಏರಿದಾಗ ಅವರು ಹಠಾತ್ ಕುಸಿದುಬಿದ್ದಿದ್ದಾರೆ ಎನ್ನಲಾಗಿದೆ.
ಕಾರ್ಯಕ್ರಮ ಪ್ರಾರಂಭಿಸುತ್ತಿದ್ದಂತೆ ನಡೆದ ಈ ಘಟನೆಯಿಂದ ಆತಂಕ್ಕೊಳಗಾದ ಮನೆಯವರು, ಕೂಡಲೇ ಸಮೀಪದ ತುಂಬೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಅದಾಗಲೇ ಮೃತಪಟ್ಟಿರುವ ಕುರಿತು ವೈದ್ಯರು ತಿಳಿಸಿದ್ದಾರೆ. ಘಟನಾ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಡಿವೈಡರ್‌ಗೆ ಬೈಕ್ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು!



















