ಹಾಸನ : ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಮತ್ತೊಂದು ಜೀವ ಹಾನಿಯ ಘಟನೆ ಬೇಲೂರು ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಕಣಗುಪ್ಪೆ ಗ್ರಾಮದಲ್ಲಿ ತೋಟದ ಕೆಲಸಕ್ಕೆ ಹೋಗಿದ್ದ 65 ವರ್ಷದ ರೈತ ರಾಜಶೆಟ್ಟಿ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.
ಬೆಳಗ್ಗೆ ಹೊಲಕ್ಕೆ ತೆರಳಿದ್ದ ಸಂದರ್ಭದಲ್ಲಿ ದಿಢೀರ್ ಆಗಿ ಎದುರಾದ ಕಾಡಾನೆ ಅವರ ಮೇಲೆ ಎರಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ದಿನೇ ದಿನೇ ಹೆಚ್ಚಾಗುತ್ತಿದ್ದು, ರೈತರು ಮತ್ತು ಗ್ರಾಮಸ್ಥರು ನಿರಂತರ ಆತಂಕದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಹಲವು ಬಾರಿ ಮನವಿ ಮಾಡಿದರೂ ಫಲಿತಾಂಶ ಸಿಕ್ಕಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ಹಾಗೂ ಅರಣ್ಯ ಇಲಾಖೆಯ ವಿರುದ್ಧ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಘಟನೆಯ ನಂತರ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂದಿನ ಕ್ರಮಗಳ ಕುರಿತು ಮಾಹಿತಿ ನಿರೀಕ್ಷಿಸಲಾಗಿದೆ.
ಇದನ್ನೂ ಓದಿ : ಹೆಚ್ಚಾಗ್ತಿದೆ ಪುಂಡರ ಹಾವಳಿ.. ಮನೆ ಮುಂದೆ ನಿಲ್ಲಿಸಿದ ಕಾರು-ಬೈಕ್‌ಗೆ ಪುಡಾರಿಗಳಿಂದ ಬೆಂಕಿ


















