ಬೆಂಗಳೂರು : ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’ಯ ಅಂಗವಾಗಿ ರಾಷ್ಟ್ರೀಯ ಮತ್ತು ರಾಜ್ಯ ಮಹಿಳಾ ಆಯೋಗಗಳು ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಎಂಬ ವಿಶೇಷ ಜನಜಾಗೃತಿ ಅಭಿಯಾನವನ್ನು ಆರಂಭಿಸಿದೆ. ಈ ಕಾರ್ಯಕ್ರಮದ ಮೂಲಕ ಮಹಿಳೆಯರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸುವುದು ಮತ್ತು ಅವರೊಂದಿಗೆ ಸಂವಾದ ನಡೆಸುವುದು ಮುಖ್ಯ ಉದ್ದೇಶವಾಗಿದೆ.
ಈ ಅಭಿಯಾನವು ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಮಹಿಳೆಯರಿಗೆ ನೆರವಾಗುವ ಉದ್ದೇಶದಿಂದ ರೂಪುಗೊಂಡಿದ್ದು, ಮಹಿಳೆಯರ ಸಮಸ್ಯೆಗಳನ್ನು ಕೇಳಿ ಅವುಗಳಿಗೆ ತಕ್ಷಣದ ಪರಿಹಾರ ನೀಡಲಾಗುತ್ತದೆ.
ಇದೇ ಬರುವ ಏಪ್ರಿಲ್ 17ರಂದು ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಬೆಳಿಗ್ಗೆ 11:00 ಗಂಟೆಗೆ ‘ಮಹಾ ಜನ್ ಸುನ್ವಾಯಿ’ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಮಹಿಳೆಯರು ತಮ್ಮ ಸಮಸ್ಯೆಗಳನ್ನು ನೇರವಾಗಿ ಆಯೋಗದ ಮುಂದೆ ಮಂಡಿಸಲು ಅವಕಾಶವಿರಲಿದೆ. ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಇದು ಹೆಚ್ಚು ಸಹಕಾರಿಯಾಗಲಿದೆ.
ಈ ಕಾರ್ಯಕ್ರಮದಲ್ಲಿ ಸಾರ್ವಜನಿಕ ಸಂವಾದ, ದೂರು ಸ್ವೀಕಾರ, ತಕ್ಷಣದ ಪರಿಹಾರ ಕ್ರಮಗಳು ಹಾಗೂ ಕಾನೂನು ಸಲಹೆಗಳನ್ನು ನೀಡಲಾಗುತ್ತದೆ. ಜೊತೆಗೆ ಮಹಿಳೆಯರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಮಹಿಳಾ ಆಯೋಗವು ಎಲ್ಲಾ ಮಹಿಳೆಯರಿಗೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದು, ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳುವಂತೆ ಪ್ರಕಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ : ಪಾದಚಾರಿಗಳ ಮೇಲೆ ಉರುಳಿ ಬಿದ್ದಿ ಓಮ್ನಿ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!



















