ಬೆಂಗಳೂರು : ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಲೋಕಸೇವಾ ಆಯೋಗವು (UPSC Recruitment 2026) 16 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಸೀನಿಯರ್ ಸ್ಟೋರ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೇಂದ್ರ ಲೋಕಸೇವಾ ಆಯೋಗ
ಹುದ್ದೆಗಳ ಹೆಸರು: ಸೀನಿಯರ್ ಸ್ಟೋರ್ ಆಫೀಸರ್ ಇತ್ಯಾದಿ
ಹುದ್ದೆಗಳು: 16
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮೇ 1
ಉದ್ಯೋಗ ಸ್ಥಳ: ದೇಶಾದ್ಯಂತ
1 ಅಸಿಸ್ಟಂಟ್ ಕೀಫರ್, 7 ಸೀನಿಯರ್ ಸ್ಟೋರ್ ಆಫೀಸರ್ ಹಾಗೂ 8 ಲಿವ್ ಸ್ಟಾಕ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ.
ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಒಬಿಸಿಯವರಿಗೆ ಮೂರು ವರ್ಷಗಳ ವಯೋಮಿತಿ ವಿನಾಯಿತಿ ಇದೆ. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಉಳಿದವರಿಗೆ 25 ರೂಪಾಯಿ ಶುಲ್ಕವಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ upsc.gov.in ಗೆ ಭೇಟಿ ನೀಡಬೇಕು
ಯುಪಿಎಸ್ಸಿ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ಅಮೆರಿಕ-ಇರಾನ್ ನಡುವೆ ಮತ್ತೆ ಶಾಂತಿ ಮಾತುಕತೆ ; ಎಲ್ಲಿ ನಡೆಯಲಿದೆ ಈ ಸಂಧಾನ?



















