ಬೆಂಗಳೂರು: ಬೆಳ್ಳಂಬೆಳಿಗ್ಗೆ ಕಸದ ರಾಶಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಬೆಂಗಳೂರಿನ ಕೆ ಆರ್ ಮಾರ್ಕೆಟ್ ಫ್ಲೈಓವರ್ ಕೆಳಭಾಗದಲ್ಲಿ ನಡೆದಿದೆ.
ಬೆಂಕಿ ವ್ಯಾಪಕವಾಗಿ ಹತ್ತಿಕೊಂಡ ಪರಿಣಾಮ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಅಗ್ನಿಶಾಮಕ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆಯಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.
ಸದ್ಯ ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಕಾರಣವೇನು ಎಂಬುದರ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇದನ್ನೂ ಓದಿ : ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!


















