ಬೆಂಗಳೂರು: ಬೆಂಗಳೂರಿನ ನಾಗರಬಾವಿಯಲ್ಲಿ ವಾಹನ ಚಲಾಯಿಸುತ್ತಿದ್ದ ವೇಳೆ ರೇಸಿಂಗ್ ಮಾದರಿಯಲ್ಲಿ ಚಮಕ್ ತೋರಿಸಲು ಯತ್ನಿಸಿದ ಪರಿಣಾಮ ಎರಡು ಕಾರುಗಳು ಪರಸ್ಪರ ಡಿಕ್ಕಿಯಾದವು ಎಂಬ ಶಂಕೆ ವ್ಯಕ್ತವಾಗಿದೆ. ಡಿಕ್ಕಿಯ ತೀವ್ರತೆಗೆ ಎರಡೂ ಕಾರುಗಳು ಜಖಂಗೊಂಡಿವೆ.
ಅದೃಷ್ಟವಶಾತ್ ಈ ದುರಂತದಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಜ್ಞಾನ ಭಾರತಿ ಸಂಚಾರ ಪೊಲೀಸ್ ಠಾಣೆ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಅಪಘಾತಕ್ಕೊಳಗಾದ ಎರಡೂ ಕಾರುಗಳನ್ನು ಠಾಣೆಗೆ ಕರೆದೊಯ್ಯಲಾಗಿದೆ.
ಸದ್ಯ ಇಬ್ಬರು ಚಾಲಕರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಅಪಘಾತದ ನಿಖರ ಕಾರಣವನ್ನು ತಿಳಿದುಕೊಳ್ಳಲಾಗುತ್ತಿದೆ.
ಇದನ್ನೂ ಓದಿ : ಕಸದ ರಾಶಿಗೆ ಹೊತ್ತಿಕೊಂಡ ಬೆಂಕಿ.. ಆವರಿಸಿದ ದಟ್ಟ ಹೊಗೆ



















