ಉಡುಪಿ : ಕರ್ನಾಟಕ ಭೀಮ ಘರ್ಜನೆ ಅಧ್ಯಯನ ಹಾಗೂ ತರಬೇತಿ ಟ್ರಸ್ಟ್ ಮತ್ತು ಕರ್ನಾಟಕ ದಲಿತ ಸಂಘರ್ಷ ಜಿಲ್ಲಾ ಸಮಿತಿ ಉಡುಪಿ ಆಶ್ರಯದಲ್ಲಿ ಕುಂದಾಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಕಲಾ ಮಂದಿರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಉತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಜೀತಮುಕ್ತ ನಾಗಣ್ಣ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 6 ನೇ ರ‍್ಯಾಂಕ್ ಪಡೆದ ಶ್ರಾವ್ಯ ಕೋಟೆಬಾಗಿಲು ಇವರನ್ನು ಸನ್ಮಾನಿಸಲಾಯಿತು. ಜೊತೆಗೆ ಜಿಲ್ಲಾ ಮಟ್ಟದ ಭೀಮರತ್ನ ಪ್ರಶಸ್ತಿಗೆ ಪಾತ್ರರಾದ ಸತೀಶ ಸುರ್ಗೋಳಿ, ಅಮಿತ್ ಗುಡ್ಡೆಯಂಗಡಿ, ಭೋಜರಾಜ ಕಾವ್ರಾಡಿ, ದುರ್ಗಿ ನಕ್ರೆ ಮತ್ತು ಬಾಲಕೃಷ್ಣ ಕೋಟೆಬಾಗಿಲು ಅವರನ್ನು ಗೌರವಿಸಲಾಯಿತು.

ಈ ಸಮಾರಂಭವನ್ನು ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಉದ್ಘಾಟಿಸಿದರು. ಹಾಗೂ ಅಧ್ಯಕ್ಷತೆಯನ್ನು ಸಮಿತಿಯ ಜಿಲ್ಲಾ ಸಂಚಾಲಕ ಮಂಜುನಾಥ ಜಿ. ವಹಿಸಿದ್ದರು. ಕುಂದಾಪುರದ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಉದಯ ಕುಮಾರ್ ತಲ್ಲೂರು ಉಪಸ್ಥಿತರಿದ್ದರು.
ಇದನ್ನೂ ಓದಿ : ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಆಗಮನ.. ಗುರು ಭೈರವೈಕ್ಯ ಮಂದಿರ ಉದ್ಘಾಟನೆ


















