ರಾಯಚೂರು : ಕುರಿಗಾಹಿ ಮೇಲೆ ಮೊಸಳೆ ದಾಳಿ ನಡೆಸಿರುವ ಆಘಾತಕಾರಿ ಘಟನೆ ದೇವದುರ್ಗ ತಾಲೂಕಿನ ಹಿರೇರಾಯಕುಂಪಿ ಬಳಿ ಕೃಷ್ಣಾ ನದಿಯಲ್ಲಿ ನಡೆದಿದೆ.
ಮೊಸಳೆ ದಾಳಿಯಿಂದ ಬಲಗೈ ಕಳೆದುಕೊಂಡ ಕುರಿಗಾಹಿ ಹೊನ್ನಗುಂಡಪ್ಪ (32) ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೃಷ್ಣಾ ನದಿಯಲ್ಲಿ ಕುರಿ ಮರಿಗಳಿಗೆ ನೀರು ತರಲು ಹೋದಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಏಕಾಏಕಿ ದಾಳಿ ಮಾಡಿದ ಮೊಸಳೆ, ಹೊನ್ನಗುಂಡಪ್ಪನ ಬಲಗೈ ಕಚ್ಚಿ ನದಿಯಲ್ಲಿ ಎಳೆದುಕೊಂಡು ಹೋಗಿದೆ. ಸದ್ಯ ರಾಯಚೂರಿನ ಓಪೆಕ್ ಆಸ್ಪತ್ರೆಗೆ ಗಾಯಾಳು ಹೊನ್ನಗುಂಡಪ್ಪ ದಾಖಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಕೃಷ್ಣಾ ನದಿ ಪಾತ್ರದಲ್ಲಿ ಮೊಸಳೆಗಳ ಸಂಖ್ಯೆ ಹೆಚ್ಚಾಗಿದ್ದು, ಸ್ಪಲ್ಪ ಮೈಮರೆತರು ಮೊಸಳೆ ದಾಳಿಗೆ ಒಳಗಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಅರಣ್ಯ ಇಲಾಖೆ ಮೊಸಳೆಗಳ ನಿಯಂತ್ರಣ ಮಾಡಬೇಕು ಹಾಗೂ ದಾಳಿಗೊಳಗಾದ ಕುರಿಗಾಹಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : 1.8 ಲಕ್ಷ ರೂ. ಸಂಬಳ



















