ಬೆಂಗಳೂರು : ದೇಶದ ಗಡಿಗಳಲ್ಲಿ ರಸ್ತೆ ನಿರ್ಮಾಣ ಮಾಡುವ, ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗಡಿ ರಸ್ತೆಗಳ ಸಂಸ್ಥೆಯಲ್ಲಿ (BRO Recruitment 2026) ಖಾಲಿ ಇರುವ 899 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಡ್ರಾಟ್ಸ್ ಮನ್, ಸ್ಟೋರ್ ಕೀಪರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಗಡಿ ರಸ್ತೆಗಳ ಸಂಸ್ಥೆ
ಒಟ್ಟು ಹುದ್ದೆಗಳು: 899
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಯ ಹೆಸರು: ಡ್ರಾಟ್ಸ್ ಮನ್, ಸ್ಟೋರ್ ಕೀಪರ್ ಇತ್ಯಾದಿ
42 ಡ್ರಾಟ್ಸ್ ಮನ್, 10 ಹಿಂದಿ ಟೈಪಿಸ್ಟ್, 300 ಸ್ಟೋರ್ ಕೀಪರ್, 261 ಆಪರೇಟರ್ ಕಮ್ಯುನಿಕೇಷನ್, 207 ಆಪರೇಟರ್, 79 ಎಲೆಕ್ಟ್ರಿಶಿಯನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಟೆಸ್ಟ್, ಟ್ರೇಡ್ ಟೆಸ್ಟ್, ಮೆಡಿಕಲ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆನ್ ಲೈನ್ ಮೂಲಕ ಶೀಘ್ರದಲ್ಲಿಯೇ ಅರ್ಜಿ ಸಲ್ಲಿಕೆ ಆರಂಭ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಪ್ರಕಟಿಸಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ bro.gov.in ಗೆ ಭೇಟಿ ನೀಡಬೇಕು.
ನಿಮಗೆ ಅನ್ವಯಿಸುವ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.
ಹುದ್ದೆಯ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ಓಪನ್ ಮಾಡಬೇಕು
ಯಾವುದೇ ತಪ್ಪಿಲ್ಲದೆ ಎಲ್ಲ ವಿವರಗಳನ್ನು ಭರ್ತಿ ಮಾಡಬೇಕು
ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸ್ ಗಾಗಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್



















