ಕಾರವಾರ : ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಾಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ನಡೆದಿದೆ.
ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಪೆಟ್ರೋಲ್ ತುಂಬಿದ್ದ ಟ್ಯಾಂಕರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣವೇನೆಂದು ಇನ್ನು ತಿಳಿದುಬಂದಿಲ್ಲ.
ಟ್ಯಾಂಕರ್‌ನಲ್ಲಿ ಪೆಟ್ರೋಲ್ ತುಂಬಿದ್ದರಿಂದ ನೋಡ ನೋಡುತ್ತಿದ್ದಂತೇ ಟ್ಯಾಂಕರ್ ಪೂರ್ಣ ಹೊತ್ತಿ ಉರಿದಿದೆ. ಅಲ್ಲದೇ ಬೆಂಕಿಯ ಜ್ವಾಲೆ ರಸ್ತೆ ಪಕ್ಕದ ಅರಣ್ಯಕ್ಕೂ ವ್ಯಾಪಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.
ಇದನ್ನೂ ಓದಿ : ಅಕ್ಕನಿಂದಲೇ ತಂಗಿಯ ಕಿಡ್ನಾಪ್ – ಸಾಲದ ಹಣಕ್ಕಾಗಿ ಗ್ಯಾಂಗ್ ಜೊತೆಗೂಡಿ ದಂಪತಿಗೆ ಹಲ್ಲೆ!


















