ಹುಬ್ಬಳ್ಳಿ : ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಉಣಕಲ್ ಕ್ರಾಸ್ ಈಶ್ವರ ಗುಡಿ ಹತ್ತಿರ ನಡೆದಿದೆ.
ಕಲ್ಲೂರ ಲೇಔಟ್ ನಿವಾಸಿ ನವೀನ್ ಅಬ್ಬಿಗೇರಿ (29) ಮೃತ ಯುವಕ. ಅತಿ ವೇಗದ ಚಾಲನೆಯಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಯುವಕ ಬಿದ್ದಿದ್ದ, ಈ ವೇಳೆ ಅದೇ ರಸ್ತೆಯಲ್ಲಿ ಬಂದ ಯುವಕರು, ಗಾಯಗೊಂಡ ಯುವಕನನ್ನು ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿಯೇ ಯುವಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಸಂಚಾರಿ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಈ ಘಟನಾ ಸಂಬಂಧ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮನೆ ಮುಂದೆ ನಿಂತಿದ್ದ ಕಾರು, ಬೈಕ್‌ಗಳಿಗೆ ಬೆಂಕಿ ಹಚ್ಚಿದ್ದ ಕೇಸ್ – ಕಿಡಿಗೇಡಿ ವೈದ್ಯ ಅರೆಸ್ಟ್!



















