ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳವಾಗುತ್ತಿರುವ ಹಿನ್ನೆಲೆ ಹವಾಮಾನ ಇಲಾಖೆ ಮುಂದಿನ ಮೂರು ದಿನಗಳಿಗೆ ಹೀಟ್ ವೇವ್ ಎಚ್ಚರಿಕೆ ನೀಡಿದೆ. ಹೆಚ್ಚುತ್ತಿರುವ ಉಷ್ಣಾಂಶದಿಂದ ಜನರು ಕಂಗೆಟ್ಟಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.
ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಉಷ್ಣ ಅಲೆಯ ಪ್ರಭಾವ ಹೆಚ್ಚಾಗಲಿದೆ ಎಂದು ತಿಳಿಸಲಾಗಿದೆ. ಇಂದು ಮತ್ತು ನಾಳೆ ಬೀದರ್, ಕಲಬುರಗಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಿಗೆ ವಿಶೇಷ ಎಚ್ಚರಿಕೆ ನೀಡಲಾಗಿದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೂಡ ಹೀಟ್ ವೇವ್ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಭಾನುವಾರ ಕರಾವಳಿ ಭಾಗಗಳಲ್ಲಿ ಉಷ್ಣ ಅಲೆ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದ್ದು, ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಇದನ್ನೂ ಓದಿ: ರಾಯಬಾಗದಲ್ಲಿ ಇನ್ನು ಉದ್ಘಾಟನೆ ಕಾಣದ ಇಂದಿರಾ ಕ್ಯಾಂಟೀನ್ – ಸ್ಥಳೀಯರ ಆಕ್ರೋಶ



















