ಮೈಸೂರು : ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಾದನೂರು ಗ್ರಾಮದಲ್ಲಿ ಬೆಳ್ಳಂ ಬೆಳಿಗ್ಗೆ ಹುಲಿ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಮನೆಯ ಪಕ್ಕದ ಹೊಲದಲ್ಲಿ ಹಸು ಮೇಯಿಸುತ್ತಿದ್ದ ಸಂದರ್ಭದಲ್ಲಿ ಹುಲಿರಾಯ ಕಾಣಿಸಿಕೊಂಡಿದ್ದಾನೆ.
ಹುಲಿಯನ್ನು ಕಂಡ ಗ್ರಾಮಸ್ಥರು ಭಯಭೀತರಾಗಿ ಸ್ಥಳದಿಂದ ದೂರ ಸರಿದಿದ್ದಾರೆ. ಕೆಲವರು ಈ ಅಪರೂಪದ ದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.
ಗ್ರಾಮದ ಸಮೀಪದಲ್ಲೇ ಹುಲಿ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದ್ದು, ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ರಾಯಬಾಗದಲ್ಲಿ ಇನ್ನು ಉದ್ಘಾಟನೆ ಕಾಣದ ಇಂದಿರಾ ಕ್ಯಾಂಟೀನ್ – ಸ್ಥಳೀಯರ ಆಕ್ರೋಶ



















