ಬೆಂಗಳೂರು : ಕುಡಿದ ಮತ್ತಲ್ಲಿ ಸ್ನೇಹಿತರ ನಡುವೆ ಗಲಾಟೆ ಉಂಟಾಗಿ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು ಹೊರವಲಯ ಸರ್ಜಾಪುರ ಸಮೀಪದ ಮಟ್ಟನಹಳ್ಳಿ ಕೆರೆ ಬಳಿ ನಡೆದಿದೆ. ಮೋಹನ್(25) ಕೊಲೆಯಾದ ಯುವಕ.
ತಮಿಳುನಾಡಿನ ಸಿಂಗಸದನಪಲ್ಲಿ ಗ್ರಾಮದವನಾದ ಮೋಹನ್, ಗುರುವಾರ ಸಂಜೆ ಸ್ನೇಹಿತನ ಜೊತೆ ಎಣ್ಣೆ ಪಾರ್ಟಿ ಮಾಡಲು ಹೋಗಿದ್ದ. ಸ್ನೇಹಿತ ಮನೋಜ್ ಮತ್ತು ಮೋಹನ್ ಕಂಠಪೂರ್ತಿ ಕುಡಿದಿದ್ದರು. ಕುಡಿದ ನಶೆಯಲ್ಲಿ ಮೋಹನ್ ಮತ್ತು ಮನೋಜ್ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮನೋಜ್ ಅಲ್ಲೇ ಇದ್ದ ಕಲ್ಲನ್ನ ಮೋಹನ್ ತಲೆ ಮೇಲೆ ಎತ್ತಿ ಹಾಕಿದ್ದಾನೆ. ಘಟನೆ ಪರಿಣಾಮ ಮೋಹನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಬೆಂ.ಗ್ರಾಮಾಂತರ ಎಸ್ಪಿ ಚಂದ್ರಕಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆರೋಪಿ ಮನೋಜ್‌ನನ್ನು ಸರ್ಜಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ; ಮಾಡಿಫೈ ಕಾರಲ್ಲಿ ಕರ್ಕಶ ಶಬ್ದ.. ಸೈಲೆನ್ಸರ್‌ನಲ್ಲಿ ಬೆಂಕಿ – ನಡುರಸ್ತೆಯಲ್ಲೇ ಪುಂಡನ ಹುಚ್ಚಾಟ!


















