ಆನೇಕಲ್ : ಮಧ್ಯರಾತ್ರಿ ಬೆಂಗಳೂರು ನಗರಕ್ಕೆ ವಿಶೇಷ ಅತಿಥಿಗಳ ಆಗಮನವಾಗಿದೆ. ದಕ್ಷಿಣ ಆಫ್ರಿಕಾದಿಂದ ನಾಲ್ಕು ಚೀತಾಗಳು ನಗರಕ್ಕೆ ತಲುಪಿದ್ದು, ವನ್ಯಜೀವಿ ಪ್ರೇಮಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಮಧ್ಯರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಈ ಚೀತಾಗಳನ್ನು ಸಚಿವ ಈಶ್ವರ ಖಂಡ್ರೆ ಬರಮಾಡಿಕೊಂಡಿದ್ದಾರೆ.

ಈ ನಾಲ್ಕು ಚೀತಾಗಳಲ್ಲಿ ಎರಡು ಗಂಡು ಮತ್ತು ಎರಡು ಹೆಣ್ಣುಗಳಿವೆ. ವಿಶೇಷ ವ್ಯವಸ್ಥೆಯ ಮೂಲಕ ಅವುಗಳನ್ನು ಸುರಕ್ಷಿತವಾಗಿ ಬನ್ನೇರುಘಟ್ಟ ಮೃಗಾಲಯಕ್ಕೆ ಸಾಗಿಸಲಾಗಿದೆ. ಹೊಸ ಪರಿಸರಕ್ಕೆ ಹೊಂದಿಕೊಳ್ಳಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ.

ಹವಾಮಾನ ಬದಲಾವಣೆ ಚೀತಾಗಳಿಗೆ ಯಾವುದೇ ತೊಂದರೆ ಉಂಟುಮಾಡಬಾರದು ಎಂಬ ಕಾರಣಕ್ಕೆ ತಜ್ಞರು ವಿಶೇಷ ನಿಗಾವಹಿಸುತ್ತಿದ್ದಾರೆ. ಆಹಾರ, ಆರೋಗ್ಯ ಮತ್ತು ವರ್ತನೆಗಳ ಮೇಲೆ ನಿರಂತರವಾಗಿ ಗಮನ ಹರಿಸಲು ಸೂಚನೆ ನೀಡಲಾಗಿದೆ.

ಇನ್ನು ಮುಂದಿನ 30 ದಿನಗಳ ಕಾಲ ಈ ಚೀತಾಗಳನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗುತ್ತದೆ. ಈ ಅವಧಿಯಲ್ಲಿ ಅವುಗಳ ಆರೋಗ್ಯ ಸ್ಥಿತಿ ಪರಿಶೀಲಿಸಿ, ಸಂಪೂರ್ಣವಾಗಿ ಹೊಂದಿಕೊಂಡ ನಂತರ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶ ನೀಡುವ ಸಾಧ್ಯತೆ ಇದೆ.
ಇದನ್ನೂ ಓದಿ : ಕೆಕೆಆರ್ ವಿರುದ್ಧ ಸುಲಭ ಜಯ : ಗೆದ್ದರೂ ಖುಷಿಯಾಗಿಲ್ಲ ಗುಜರಾತ್ ನಾಯಕ ಶುಭಮನ್ ಗಿಲ್!



















