ಬೆಂಗಳೂರು : ಸರ್ಕಾರದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ಕಲಬುರಗಿಯಲ್ಲಿರುವ ನೌಕರರ ರಾಜ್ಯ ವಿಮಾ ನಿಗಮದಲ್ಲಿ (ESIC Karnataka Recruitment 2026) ಖಾಲಿ ಇರುವ 48 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 48 ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಈ ಕೆಳಗಿನಂತಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನೌಕರರ ರಾಜ್ಯ ವಿಮಾ ನಿಗಮ (ESIC)
ಹುದ್ದೆ ಹೆಸರು: ಸೀನಿಯರ್ ರೆಸಿಡೆಂಟ್
ಒಟ್ಟು ಹುದ್ದೆಗಳು: 48
ಉದ್ಯೋಗ ಸ್ಥಳ: ಕಲಬುರಗಿ
ಸಂದರ್ಶನದ ದಿನಾಂಕ: ಏಪ್ರಿಲ್ 27
ಸಂದರ್ಶನಕ್ಕೆ ಹಾಜರಾಗುವವರಿಗೆ 44 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನಿಗದಿತ ಕ್ಷೇತ್ರದಲ್ಲಿ ಕಾರ್ಯಾನುಭವ ಇರುವವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.4 ಲಕ್ಷ ರೂಪಾಯಿ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಂಡಿ, ಎಂಎಸ್, ಡಿ ಎನ್ ಬಿ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಮೊದಲು esic.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಇನ್ನು, ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿದ ಬಳಿಕ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ದಾಖಲೆಗಳೊಂದಿಗೆ ನಿಗದಿತ ದಿನಾಂಕದಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು.
ಸಂದರ್ಶನ ನಡೆಯುವ ಸ್ಥಳ
ಇಎಸ್ಐಸಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಕಲಬುರಗಿ.
ಇದನ್ನೂ ಓದಿ : KRS ಡ್ಯಾಂ ನೀರಿನ ಮಟ್ಟ 99 ಅಡಿಗೆ ಕುಸಿತ : ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಜಲಕಂಟಕ ಫಿಕ್ಸ್?



















