ಬಾಗಲಕೋಟೆ : ಇಲ್ಲಿನ ನವನಗರದಲ್ಲಿ ಸಾಲಗಾರರ ಕಿರುಕುಳದಿಂದ ಬೇಸತ್ತ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ನವನಗರದ ಸೆಕ್ಟರ್ ನಂಬರ್ 36ರಲ್ಲಿ ನಡೆದ ಈ ಘಟನೆಯಲ್ಲಿ ಭೀಮು ಬಸಪ್ಪ ಎಂಬಾತ ಮದ್ಯಪಾನ ಮಾಡಿದ ಸ್ಥಿತಿಯಲ್ಲಿ ಟವರ್ ಏರಿದ್ದಾನೆ ಎಂದು ತಿಳಿದುಬಂದಿದೆ.
ಹೆಚ್ಚಿನ ಬಡ್ಡಿಗೆ ಕೈಗಡ ಸಾಲ ತೆಗೆದುಕೊಂಡಿದ್ದ ಭೀಮು, ಸಾಲಗಾರರ ಕಿರುಕುಳದಿಂದ ನೊಂದು ಈ ತೀರ್ಮಾನಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಡಿವೈಎಸ್ಪಿ ಗಜಾನನ ಸುತಾರ್ ಸ್ಥಳ್ಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಲು ಮುಂದಾಗಿದ್ದಾರೆ.
ಟವರ್ ಮೇಲಿದ್ದ ವ್ಯಕ್ತಿಯನ್ನು ಮನವೊಲಿಸಲು ಪೊಲೀಸರು ಸಾಕಷ್ಟು ಪ್ರಯತ್ನ ನಡೆಸಿದ್ದು, ಕೊನೆಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆ ಭೀಮು ಟವರ್‌ನಿಂದ ಕೆಳಗೆ ಇಳಿದಿದ್ದಾನೆ. ಯಾವುದೇ ಅನಾಹುತ ಸಂಭವಿಸದೆ ಪ್ರಕರಣ ಸುಖಾಂತ್ಯ ಕಂಡಿದೆ. ನಂತರ ಭೀಮನನ್ನು ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಘಟನೆ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ : ಕೊನೆಗೂ ಸೆರೆ ಸಿಕ್ಕ ನರಹಂತಕ ಪುಂಡಾನೆ – ಮೂರು ದಿನಗಳ ಆಪರೇಷನ್ ಯಶಸ್ವಿ!



















