ಬೆಂಗಳೂರು: ದೇಶದ ಸಾರ್ವಜನಿಕ ವಲಯದ ಬೃಹತ್ ಬ್ಯಾಂಕ್ ಆಗಿರುವ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ (SBI Recruitment 2026) ಖಾಲಿ ಇರುವ 105 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 105 ರಿಸಾಲ್ವರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಎಂಬುದು ಸೇರಿ ನೇಮಕಾತಿಗೆ ಸಂಬಂಧಿಸಿದ ವಿವಿಧ ಮಾಹಿತಿ ಇಲ್ಲಿದೆ.
ನೇಮಕಾತಿ ಸಂಸ್ಥೆ: ಭಾರತೀಯ ಸ್ಟೇಟ್ ಬ್ಯಾಂಕ್
ಒಟ್ಟು ಹುದ್ದೆಗಳು: 105
ಹುದ್ದೆಗಳ ಹೆಸರು: ರಿಸಾಲ್ವರ್
ಉದ್ಯೋಗ ಸ್ಥಳ: ಬೆಂಗಳೂರು ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 5
ಕರ್ನಾಟಕದ ಬೆಂಗಳೂರಿನಲ್ಲಿಯೇ 5 ಹುದ್ದೆಗಳು ಖಾಲಿ ಇವೆ. ಒಡಿಶಾದ ಭುವನೇಶ್ವರ, ಗುಜರಾತ್ ನ ಗಾಂಧಿನಗರ, ಮಧ್ಯಪ್ರದೇಶದ ಭೋಪಾಲ್ ಸೇರಿ ದೇಶದ ಪ್ರಮುಖ ನಗರಗಳಲ್ಲಿ ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ 65 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಶಾರ್ಟ್ ಲಿಸ್ಟಿಂಗ್ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗ ಮಾಸಿಕ 50 ಸಾವಿರ ರೂ. ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ sbi.co.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು
ಇದನ್ನೂ ಓದಿ: ಉಚಿತ ಎಲೆಕ್ಟ್ರಿಕ್ ಮೋಟಾರ್ & ಪಂಪ್ ರಿಪೇರಿ ತರಬೇತಿ – ‘ರುಡ್‌ಸೆಟ್’ ಸಂಸ್ಥೆಯಿಂದ ಅರ್ಜಿ ಆಹ್ವಾನ!



















