ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಎಜುಕೇಷನ್ ಆ್ಯಂಡ್ ರಿಸರ್ಚ್ ನೆಟ್ ವರ್ಕ್ ಇಂಡಿಯಾ (ERNET India Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 6 ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 6 ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.
ನೇಮಕಾತಿ ಸಂಸ್ಥೆ: ಎಜುಕೇಷನ್ ಆ್ಯಂಡ್ ರಿಸರ್ಚ್ ನೆಟ್ ವರ್ಕ್ ಇಂಡಿಯಾ
ಒಟ್ಟು ಹುದ್ದೆಗಳು: 6
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಮ್ಯಾನೇಜರ್
ಉದ್ಯೋಗ ಸ್ಥಳ: ಬೆಂಗಳೂರು ಹಾಗೂ ದೆಹಲಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 27
ಕರ್ನಾಟಕದ ಬೆಂಗಳೂರು ಹಾಗೂ ದೆಹಲಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ, ಬಿ.ಟೆಕ್, ಎಂಎಸ್ಸಿ, ಎಂಸಿಎ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 63 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 55 ಸಾವಿರ ರೂ.ನಿಂದ 1.25 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ernet.in ಗೆ ಭೇಟಿ ನೀಡಿ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ದಾಖಲೆಗಳ ಸಾಫ್ಟ್ ಕಾಪಿಗಳನ್ನು recruitment@ernet.in ಗೆ ಮೇಲ್ ಮಾಡಬೇಕು ಎಂದು ತಿಳಿಸಲಾಗಿದೆ.
ಇದನ್ನೂ ಓದಿ: LIC ಪಾಲಿಸಿದಾರರಿಗೆ ಗುಡ್ ನ್ಯೂಸ್ : ಬಂದಿದೆ ಹೊಸ ಆ್ಯಪ್, ಇದರಲ್ಲೇ ಸಾಲ ಕೂಡ ಲಭ್ಯ



















