ಬೆಂಗಳೂರು : ದೇಶದ ಪ್ರಮುಖ ವಿಮಾನಯಾನ ಸಂಸ್ಥೆಗಳಲ್ಲಿ ಒಂದಾಗಿರುವ ಏರ್ ಇಂಡಿಯಾ (Air India Recruitment 2026) ಸಂಸ್ಥೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ವಿವಿಧ ಟ್ರೈನಿ ಕ್ಯಾಬಿನ್ ಕ್ರ್ಯೂ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದರೊಂದಿಗೆ ವಿಮಾನಯಾನ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಎನಿಸಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಈ ಕೆಳಗಿನಂತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಏರ್ ಇಂಡಿಯಾ
ಹುದ್ದೆ ಹೆಸರು: ಟ್ರೈನಿ ಕ್ಯಾಬಿನ್ ಕ್ರ್ಯೂ
ಒಟ್ಟು ಹುದ್ದೆಗಳು: ವಿವಿಧ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 30
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಫ್ರೆಶರ್ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18ರಿಂದ 27 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ airindia.com ಗೆ ಭೇಟಿ ನೀಡಬೇಕು
ಟ್ರೈನಿ ಕ್ಯಾಬಿನ್ ಕ್ರ್ಯೂ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ನಲ್ಲಿ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು
ಇದನ್ನೂ ಓದಿ : ಮಿಂಚಿನ ವೇಗದ ಸ್ಟಂಪಿಂಗ್.. ಗ್ರೀನ್ ಆಟಕ್ಕೆ ಜುರೆಲ್ ಬ್ರೇಕ್ ; ಈ ಬಾರಿ IPLನ ಬೆಸ್ಟ್ ಔಟ್?


















