ರಾಯ್‌ಪುರ : ಖಾಸಗಿ ವಿಮಾನವೊಂದು ಪತನಗೊಂಡ ಘಟನೆ ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಸ್ಥಳೀಯರ ಪ್ರಕಾರ, ಅರಣ್ಯ ಪ್ರದೇಶದಲ್ಲಿ ಮರಕ್ಕೆ ಅಪ್ಪಳಿಸಿ ನಂತರ ಜೆಟ್ ಪತನಗೊಂಡಿದೆ.
ಜಶ್ಪುರ್-ನಾರಾಯಣಪುರ್ ಪ್ರದೇಶದ ಬೆಟ್ಟದ ಇಳಿಜಾರಿನಲ್ಲಿ ಪತನಗೊಂಡ ಜೆಟ್‌ನಿಂದ ದಟ್ಟವಾದ ಹೊಗೆ ಮತ್ತು ಜ್ವಾಲೆಗಳು ಹೊರಬರುತ್ತಿರುವ ದೃಶ್ಯಗಳು ಸ್ಥಳದಲ್ಲಿ ಕಂಡುಬಂದಿದೆ. ವಿಮಾನದಲ್ಲಿ ಎಷ್ಟು ಜನ ಇದ್ದರು ಎಂಬುದು ಇನ್ನೂ ತಿಳಿದುಬಂದಿಲ್ಲ.
ದುರಂತದ ಸಮಯದಲ್ಲಿ ವಿಮಾನದಲ್ಲಿ ಎಷ್ಟು ಜನರಿದ್ದರು ಎಂಬುದನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. ವಿಮಾನದಲ್ಲಿದ್ದವರ ಸ್ಥಿತಿಯೂ ಸ್ಪಷ್ಟವಾಗಿಲ್ಲ. ಪ್ರಸ್ತುತ ರಕ್ಷಣಾ ತಂಡಗಳಿಂದ ಕಾರ್ಯಾಚರಣೆಗಳು ನಡೆಯುತ್ತಿವೆ. ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಧಿಕಾರಿಗಳು ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳುವ ನಿರೀಕ್ಷೆಯಿದೆ.
ಕಾಡು ಪ್ರದೇಶದಲ್ಲಿ ಖಾಸಗಿ ವಿಮಾನ ಪತನಗೊಂಡಿರುವ ಕಾರಣ ರಕ್ಷಣಾ ತಂಡಗಳು ತಕ್ಷಣಕ್ಕೆ ಸ್ಥಳಕ್ಕೆ ಧಾವಿಸಲು ಸಾಧ್ಯವಾಗಲಿಲ್ಲ. ಹರಸಾಹಸ ಮಾಡಿ ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಕಾಡು ಪ್ರದೇಶದ ಕಾರಣ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಸ್ಥಳೀಯ ಜಿಲ್ಲಾಡಳಿತ, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ವಿಮಾನ, ಪ್ರಯಾಣಿಕರ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಸಿಂಗಲ್ ಎಂಜಿನ್ ಪ್ರೊಪೆಲ್ಲರ್ ಏರ್‌ಕ್ರಾಫ್ಟ್ ಸಾಮಾನ್ಯವಾಗಿ ಹೆಚ್ಚು ಎತ್ತರದಲ್ಲಿ ಹಾರಾಟ ನಡೆಸುವುದಿಲ್ಲ. ಆದರೆ ಅಗತ್ಯಬಿದ್ದಾಗ, ಸುರಕ್ಷತೆಗಾಗಿ ಎತ್ತರದಲ್ಲಿ ಹಾರಾಟ ನಡೆಸಲಿದೆ. ಆದರೆ ಈ ಘಟನೆಯಲ್ಲಿ ಪೈಲೆಟ್ ಪರ್ವತ, ಕಾಡು ಪ್ರದೇಶದಲ್ಲಿ ಅಪಾಯದ ಮುನ್ಸೂಚನೆ ಇದ್ದರೂ ಕಡೆಗಣಿಸಿದ್ರಾ ಅನ್ನೋ ಅನುಮಾನಗಳು ಶುರವಾಗಿದೆ.
ಇದನ್ನೂ ಓದಿ : ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅಕೌಂಟಂಟ್ ಹುದ್ದೆಗಳ ನೇಮಕಾತಿ – ಬಿ.ಕಾಂ ಮುಗಿಸಿದ್ದರೆ ಸಾಕು!



















