ಕಲಬುರಗಿ : ಜಿಲ್ಲೆಯ ಸೇಡಂ ಪಟ್ಟಣದಲ್ಲಿ ವಿವಾದಾತ್ಮಕ ಘಟನೆ ಬೆಳಕಿಗೆ ಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲೇ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಸಚಿವರ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ ಘಟನೆ ಚರ್ಚೆಗೆ ಕಾರಣವಾಗಿದೆ.
ಸಚಿವ ಶರಣಪ್ರಕಾಶ ಪಾಟೀಲ್ ಅವರ ಜನ್ಮದಿನದ ಅಂಗವಾಗಿ ಪೊಲೀಸ್ ಸಿಬ್ಬಂದಿಯಿಂದ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಕಾನ್ಸ್‌ಟೇಬಲ್ ಮಾರುತಿ ಸಚಿವರ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ್ದಾರೆ. ಈ ದೃಶ್ಯ ಹೆಚ್ಚುವರಿ ಎಸ್‌ಪಿ ಸೇರಿದಂತೆ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲೇ ನಡೆದಿರುವುದು ಗಮನಾರ್ಹವಾಗಿದೆ.
ಮಾರುತಿ ಸೇಡಂ ಸಿಪಿಐ ಕಚೇರಿಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ಸಿಎಂ ಚಿನ್ನದ ಪದಕ ಪಡೆದಿದ್ದ ಮಾರುತಿ, ಈ ರೀತಿಯ ನಡೆ ತೋರಿರುವುದು ಇನ್ನಷ್ಟು ಚರ್ಚೆಗೆ ಕಾರಣವಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕ ವಲಯದಲ್ಲಿ ಪೊಲೀಸ್ ಸಿಬ್ಬಂದಿಯ ನಡೆ ಎಷ್ಟು ಸೂಕ್ತ ಎಂಬ ಬಗ್ಗೆ ಚರ್ಚೆಗಳು ಜೋರಾಗಿದೆ.
ಇದನ್ನೂ ಓದಿ : ಜಲಮಂಡಳಿಯಿಂದ ಟ್ಯಾಂಕರ್ ಮಾಫಿಯಾಗೆ ಬ್ರೇಕ್ – ‘ಸಂಚಾರಿ ಕಾವೇರಿ’ಗೆ ಹೆಚ್ಚಿನ ಆದ್ಯತೆ!



















