ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸ್ಥಳೀಯ ಸ್ವರಾಜ್ಯ ಸಂಸ್ಥೆಗಳ ಚುನಾವಣೆ ವಿಳಂಬ : ರಾಜ್ಯ ಸರ್ಕಾರದ ವಿರುದ್ಧ ರಾಷ್ಟ್ರಪತಿಗೆ ದಿನೇಶ್‌ ಕಲ್ಲಹಳ್ಳಿ ದೂರು!

April 21, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕದಲ್ಲಿ ಸ್ಥಳೀಯ ಸ್ವರಾಜ್ಯ ಸಂಸ್ಥೆಗಳಾದ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಂವಿಧಾನದಲ್ಲಿ ನಿಗದಿಪಡಿಸಿದ ಅವಧಿಯೊಳಗೆ ನಡೆಸದೆ ಉದ್ದೇಶಪೂರ್ವಕವಾಗಿ ಮುಂದೂಡಲಾಗುತ್ತಿದೆ. ನ್ಯಾಯಾಲಯಗಳ ಸೂಚನೆಗಳಿದ್ದರೂ ಚುನಾವಣೆಗಳನ್ನು ನಡೆಸದಿರುವುದು ಕಾನೂನಿನ ಆಳ್ವಿಕೆಗೆ ವಿರುದ್ಧವಾಗಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕರ್ನಾಟಕ ಸರ್ಕಾರದ ವಿರುದ್ದ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಅವರು ದೂರು ಸಲ್ಲಿಸಿದ್ದಾರೆ.

ಕರ್ನಾಟಕದಲ್ಲಿ ಸ್ಥಳೀಯ ಸ್ವರಾಜ್ಯ ಸಂಸ್ಥೆಗಳ ಚುನಾವಣೆಯನ್ನು ನಿರಂತರವಾಗಿ ಮುಂದೂಡುವುದು ಸಂವಿಧಾನದ Articles 243 ರಿಂದ 243-0 ರಲ್ಲಿ ಹೇಳಿರುವ ಕಡ್ಡಾಯ ನಿಯಮಗಳನ್ನು ಉಲ್ಲಂಘಿಸುವಂತಾಗಿದೆ. ಇದರಿಂದ ಪ್ರಜಾಪ್ರಭುತ್ವದ ಮೂಲಭೂತ ತತ್ವವಾದ ವಿಕೇಂದ್ರೀಕರಣ ವ್ಯವಸ್ಥೆಗೆ ಆಡಳಿತ ಹಾನಿಯಾಗಿದೆ. ಹೀಗಾಗಿ ಸರ್ಕಾರದ ವಿರುದ್ದ ತಕ್ಷಣ ಕ್ರಮಕ್ಕೆ ದಿನೇಶ್‌ ಕಲ್ಲಹಳ್ಳಿ ಮನವಿ ಮಾಡಿದ್ದಾರೆ.

ಕರ್ನಾಟಕದಲ್ಲಿ ಚುನಾವಣೆಗಳನ್ನು ನಿರಂತರವಾಗಿ ಮುಂದೂಡುವ ಮೂಲಕ ಜನಪ್ರತಿನಿಧಿಗಳಿಲ್ಲದ ಆಡಳಿತವನ್ನು ಮುಂದುವರಿಸಲಾಗುತ್ತಿದೆ, ಇದರಿಂದ ಸ್ಥಳೀಯ ಆಡಳಿತ ವ್ಯವಸ್ಥೆ ದುರ್ಬಲಗೊಂಡಿದ್ದು, ಪ್ರಜಾಪ್ರಭುತ್ವದ ಮೂಲಭೂತ ಹಕ್ಕುಗಳಾದ ಜನರ ಪ್ರತಿನಿದಿತ್ವ ಮತ್ತು ಪಾಲ್ಗೊಳ್ಳುವಿಕೆಯ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ದಿನೇಶ್‌ ಕಲ್ಲಹಳ್ಳಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮೇ 2023ರಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಕರ್ನಾಟಕ ಸರ್ಕಾರವು ರಾಜ್ಯದ ಏಕತೆ ಮತ್ತು ಅಖಂಡತೆಯನ್ನು ಕಾಪಾಡುವುದಾಗಿ ಪ್ರಮಾಣ ವಚನ ಸ್ವೀಕರಿಸಿದರೂ, ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಬದಲಿಗೆ, ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಿರ್ಲಕ್ಷ್ಯಪೂರ್ವಕವಾಗಿ ಮುಂದೂಡಲಾಗಿದೆ. ಇದರಿಂದ ಮಹಿಳೆಯರು, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ದೊರೆಯಬೇಕಿದ್ದ ರಾಜಕೀಯ ಪ್ರತಿನಿಧಿತ್ವದ ಅವಕಾಶಗಳು ಕಸಿದುಕೊಳ್ಳಲ್ಪಟ್ಟಿವೆ. ಇದು ಸಂವಿಧಾನದಲ್ಲಿ ನೀಡಿರುವ ಸಾಮಾಜಿಕ ನ್ಯಾಯದ ತತ್ರಗಳಿಗೂ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತಗಳ ಅವಧಿ ಜೂನ್ 2021ರಲ್ಲಿ ಮುಗಿದಿದ್ದರೂ, ಇಂದಿಗೂ ಚುನಾವಣೆ ನಡೆಸಿಲ್ಲ. ಕ್ಷೇತ್ರ ಪುನರ್ವಿಂಗಡಣೆ ಪೂರ್ಣಗೊಂಡಿದ್ದರೂ ಮೀಸಲಾತಿ ಪ್ರಕಟಿಸುವಲ್ಲಿ ಉದ್ದೇಶಪೂರ್ವಕ ವಿಳಂಬ ಮಾಡಲಾಗಿದೆ. ಈ ಕುರಿತು ಉಚ್ಚ ನ್ಯಾಯಾಲಯದ ಆದೇಶಗಳನ್ನು ಪಾಲಿಸದೇ, ದಂಡ ಪಾವತಿಸುವ ಮಟ್ಟಕ್ಕೆ ಸರ್ಕಾರ ಇಳಿದಿದೆ. ನ್ಯಾಯಾಲಯದ ನಿರ್ದೇಶನಗಳನ್ನು ನಿರ್ಲಕ್ಷಿಸುವುದು ಸಂವಿಧಾನದ Article 144 ರ ವಿರುದ್ಧವಾಗಿದ್ದು, ನ್ಯಾಯಾಂಗದ ಗೌರವವನ್ನು ಕುಗ್ಗಿಸುವ ಕಾರ್ಯವಾಗಿದೆ ಎಂದಿದ್ದಾರೆ.

ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಗಳ ಅವಧಿ ಮುಗಿದರೂ ಚುನಾವಣೆಗಳನ್ನು ನಡೆಸಲಾಗಿಲ್ಲ. ನಗರ ಪ್ರದೇಶಗಳಲ್ಲಿ ಜನಪ್ರತಿನಿಧಿಗಳ ಕೊರತೆಯಿಂದ ಸ್ಥಳೀಯ ಸಮಸ್ಯೆಗಳ ಪರಿಹಾರ ವಿಳಂಬಗೊಳ್ಳುತ್ತಿದೆ. ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಅಧಿಕಾರಿಗಳ ಕೈಯಲ್ಲಿ ಸೀಮಿತಗೊಂಡಿದ್ದು, ಜನರ ಉತ್ತರದಾಯಕತೆ ಇಲ್ಲದ ಆಡಳಿತ ರೂಪುಗೊಂಡಿದೆ. ಜನವರಿ 2026ರಲ್ಲಿ ಸುಮಾರು 6000 ಗ್ರಾಮ ಪಂಚಾಯತಗಳ ಅವಧಿ ಮುಗಿದಿದ್ದರೂ, ಮುಂಚಿತವಾಗಿ ವಾರ್ಡ್ ವಿಂಗಡಣೆ ಮತ್ತು ಮೀಸಲಾತಿ ಪ್ರಕಟಿಸಿ ಚುನಾವಣೆ ನಡೆಸಲು ಸರ್ಕಾರ ವಿಫಲವಾಗಿದೆ. ಇದು ಸಂವಿಧಾನದ 243-E ವಿಧಿಯಲ್ಲಿ ನಿಗದಿಪಡಿಸಿರುವ ಐದು ವರ್ಷದ ಅವಧಿ ನಿಯಮವನ್ನು ಉಲ್ಲಂಘಿಸುತ್ತದೆ. ಗ್ರಾಮೀಣ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಗ್ರಾಮೀಣ ಅಭಿವೃದ್ಧಿಗೆ ತೀವ್ರ ಹಾನಿಯಾಗಿದೆ ಎಂದು ದಿನೇಶ್‌ ಕಲ್ಲಹಳ್ಳಿ ಆರೋಪಿಸಿದ್ದಾರೆ.

ಈ ಎಲ್ಲಾ ವಿಚಾರಗಳನ್ನು ಸಮಗ್ರವಾಗಿ ಪರಿಗಣಿಸಿ, ಕರ್ನಾಟಕ ರಾಜ್ಯದಲ್ಲಿ ಸ್ಥಳೀಯ ಸ್ವರಾಜ್ಯ ಸಂಸ್ಥೆಗಳ ಚುನಾವಣೆಯನ್ನು ಇನ್ನಷ್ಟು ವಿಳಂಬವಿಲ್ಲದೆ ತಕ್ಷಣ ನಡೆಸುವಂತೆ ಕರ್ನಾಟಕ ಸರ್ಕಾರಕ್ಕೆ ಕಟ್ಟುನಿಟ್ಟಿನ ಹಾಗೂ ಬಾಧ್ಯತೆಯ ನಿರ್ದೇಶನಗಳನ್ನು ನೀಡುವಂತೆ ರಾಷ್ಟ್ರಪತಿಗಳಿಗೆ ದಿನೇಶ್‌ ಕಲ್ಲಹಳ್ಳಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಮೀನು ಹಿಡಿಯಲು ಹೋದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು!

Tags: bengaloreKarnataka News beat
SendShareTweet
Previous Post

ಮೀನು ಹಿಡಿಯಲು ಹೋದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು!

Next Post

ಒಪ್ಪಂದವಿಲ್ಲದಿದ್ದರೆ ‘ಬಾಂಬ್ ಮಳೆ’ ಖಚಿತ ಎಂದ ಟ್ರಂಪ್ – ‘ಹೊಸ ಅಸ್ತ್ರ’ ಪ್ರಯೋಗಕ್ಕೆ ಸಿದ್ಧ ಎಂದ ಇರಾನ್

Related Posts

ಬೆಂಗಳೂರಿನಲ್ಲಿರುವ ಕೊಹ್ಲಿ ಪಾಲುದಾರಿಕೆಯ ‘one8 Commune’ ರೆಸ್ಟೋರೆಂಟ್ ಕ್ಲೋಸ್‌!
ಬೆಂಗಳೂರು

ಬೆಂಗಳೂರಿನಲ್ಲಿರುವ ಕೊಹ್ಲಿ ಪಾಲುದಾರಿಕೆಯ ‘one8 Commune’ ರೆಸ್ಟೋರೆಂಟ್ ಕ್ಲೋಸ್‌!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!
ರಾಜಕೀಯ

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ KSRTC ಬಸ್‌.. ತಪ್ಪಿದ ಭಾರೀ ಅನಾಹುತ!
ತುಮಕೂರು

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ KSRTC ಬಸ್‌.. ತಪ್ಪಿದ ಭಾರೀ ಅನಾಹುತ!

ಜನಗಣತಿ ಕಾರ್ಯ ನಿಧಾನ – ಗೈರಾಗಿರುವ ಸಿಬ್ಬಂದಿಗಳ ಮೇಲೆ FIR ಕ್ರಮದ ಎಚ್ಚರಿಕೆ!
ಬೆಂಗಳೂರು

ಜನಗಣತಿ ಕಾರ್ಯ ನಿಧಾನ – ಗೈರಾಗಿರುವ ಸಿಬ್ಬಂದಿಗಳ ಮೇಲೆ FIR ಕ್ರಮದ ಎಚ್ಚರಿಕೆ!

ದಾಂಡೇಲಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು.. ಇಬ್ಬರು ಸಾವು, ಓರ್ವ ಗಂಭೀರ
ಉತ್ತರ ಕನ್ನಡ

ದಾಂಡೇಲಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು.. ಇಬ್ಬರು ಸಾವು, ಓರ್ವ ಗಂಭೀರ

ಒಣಹುಲ್ಲು ಸಾಗಿಸುತ್ತಿದ್ದ ಬೊಲೆರೊಗೆ ವಿದ್ಯುತ್ ತಂತಿ ತಗುಲಿ ಬೆಂಕಿ ; ನಡುರಸ್ತೆಯಲ್ಲಿ ಧಗಧಗ!
ಯಾದಗಿರಿ

ಒಣಹುಲ್ಲು ಸಾಗಿಸುತ್ತಿದ್ದ ಬೊಲೆರೊಗೆ ವಿದ್ಯುತ್ ತಂತಿ ತಗುಲಿ ಬೆಂಕಿ ; ನಡುರಸ್ತೆಯಲ್ಲಿ ಧಗಧಗ!

Next Post
ಒಪ್ಪಂದವಿಲ್ಲದಿದ್ದರೆ ‘ಬಾಂಬ್ ಮಳೆ’ ಖಚಿತ ಎಂದ ಟ್ರಂಪ್ – ‘ಹೊಸ ಅಸ್ತ್ರ’ ಪ್ರಯೋಗಕ್ಕೆ ಸಿದ್ಧ ಎಂದ ಇರಾನ್

ಒಪ್ಪಂದವಿಲ್ಲದಿದ್ದರೆ 'ಬಾಂಬ್ ಮಳೆ' ಖಚಿತ ಎಂದ ಟ್ರಂಪ್ - 'ಹೊಸ ಅಸ್ತ್ರ' ಪ್ರಯೋಗಕ್ಕೆ ಸಿದ್ಧ ಎಂದ ಇರಾನ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಇದು ಅಭಿಮಾನವಲ್ಲ, ಗುಲಾಮಗಿರಿ’ ; ಧೋನಿ, CSK ಮ್ಯಾನೇಜ್‌ಮೆಂಟ್ ವಿರುದ್ಧ ಸಂಜಯ್ ಮಂಜ್ರೇಕರ್ ಗರಂ!

‘ಇದು ಅಭಿಮಾನವಲ್ಲ, ಗುಲಾಮಗಿರಿ’ ; ಧೋನಿ, CSK ಮ್ಯಾನೇಜ್‌ಮೆಂಟ್ ವಿರುದ್ಧ ಸಂಜಯ್ ಮಂಜ್ರೇಕರ್ ಗರಂ!

ಬೆಂಗಳೂರಿನಲ್ಲಿರುವ ಕೊಹ್ಲಿ ಪಾಲುದಾರಿಕೆಯ ‘one8 Commune’ ರೆಸ್ಟೋರೆಂಟ್ ಕ್ಲೋಸ್‌!

ಬೆಂಗಳೂರಿನಲ್ಲಿರುವ ಕೊಹ್ಲಿ ಪಾಲುದಾರಿಕೆಯ ‘one8 Commune’ ರೆಸ್ಟೋರೆಂಟ್ ಕ್ಲೋಸ್‌!

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಇದು ಅಭಿಮಾನವಲ್ಲ, ಗುಲಾಮಗಿರಿ’ ; ಧೋನಿ, CSK ಮ್ಯಾನೇಜ್‌ಮೆಂಟ್ ವಿರುದ್ಧ ಸಂಜಯ್ ಮಂಜ್ರೇಕರ್ ಗರಂ!

‘ಇದು ಅಭಿಮಾನವಲ್ಲ, ಗುಲಾಮಗಿರಿ’ ; ಧೋನಿ, CSK ಮ್ಯಾನೇಜ್‌ಮೆಂಟ್ ವಿರುದ್ಧ ಸಂಜಯ್ ಮಂಜ್ರೇಕರ್ ಗರಂ!

ಬೆಂಗಳೂರಿನಲ್ಲಿರುವ ಕೊಹ್ಲಿ ಪಾಲುದಾರಿಕೆಯ ‘one8 Commune’ ರೆಸ್ಟೋರೆಂಟ್ ಕ್ಲೋಸ್‌!

ಬೆಂಗಳೂರಿನಲ್ಲಿರುವ ಕೊಹ್ಲಿ ಪಾಲುದಾರಿಕೆಯ ‘one8 Commune’ ರೆಸ್ಟೋರೆಂಟ್ ಕ್ಲೋಸ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat